
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29-ಕುಕನೂರ ತಾಲ್ಲೂಕಿನ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ 3 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಂಗ್ಲ ಭಾಷೆಯಲ್ಲಿ ಎಂ.ಎ ಬಿ.ಎಡ್, ಭೌತಶಾಸ್ತçದಲ್ಲಿ ಎಂಎಸ್ಸಿ ಬಿ.ಎಡ್, ಹಾಗೂ ಜೀವಶಾಸ್ತçದಲ್ಲಿ ಎಂಎಸ್ಸಿ ಬಿ.ಎಡ್, ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜೂನ್ 4ರ ಒಳಗಾಗಿ ಕುಕನೂರು ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕುಕನೂರು ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ಕಾರ್ಯಾಲಯಕ್ಕೆ ಅಥವಾ ಪ್ರಾಂಶುಪಾಲರನ್ನು ಸಂರ್ಪಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.