
ಅಧಿಕಾರಿಗಳು ಕಾಲಮಿತಿಗೆ ಒತ್ತುನೀಡಿ ಪ್ರಗತಿ ಸಾಧಿಸಿ:
ಸಂಸದ ರಾಜಶೇಖರ ಹಿಟ್ನಾಳ
ಕರುನಾಡ ಬೆಳಗು ಸುದ್ದಿ
ಕುಷ್ಟಗಿ, 05- ತಾಲೂಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸರಕಾರದ ನಿಗದಿಪಡಿಸಿದ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರಿಸಾಧನೆಗೆ ಒತ್ತು ನೀಡಿ ಪ್ರಗತಿಯನ್ನು ಸಾಧಿಸಬೇಕು ಎಂದು ಕೊಪ್ಪಳ ಲೋಕಸಭಾ ಸದಸ್ಯ ಹಾಗೂ ಅಧ್ಯಕ್ಷರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸದಸ್ಯ ರಾಜಶೇಖರ ಹಿಟ್ನಾಳ ಹೇಳಿದರು.
ಇಂದು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ವಾಲ್ಮೀಕಿ ಸಮುದಾಯ ಭವನ ದಲ್ಲಿ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಸರಕಾರದ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವಲ್ಲಿ ಅವಿರತವಾಗಿ ಶ್ರಮಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಅಲೆದಾಡದಂತೆ ಅವರ ಕೆಲಸ ಮಾಡಿಕೊಡಬೇಕು. ಗ್ರಾಮೀಣ ಮಟ್ಟದಲ್ಲಿ ಅಧಿಕಾರಿಗಳು ನಿಮ್ಮಗುರಿ ಸಾಧನೆಯತ್ತ ಗಮನ ಹರಿಸಬೇಕು. ಅಂದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ಹನುಮನಾಳ ಹೋಬಳಿಗೆ ಸಂಬಂದಿಸಿದ ಹನುಮನಾಳ, ಮಾಲಗಿತ್ತಿ , ಯರಗೇರಿ, ತುಗ್ಗಲದೋಣಿ, ಬಿಳೇಕಲ್, ಬೆನಕನಾಳ, ಹಿರೇಗೊಣ್ಣಗರ , ಜಾ ಗುಡದೂರು, ತುಮರಿಕೊಪ್ಪ, ಹಾಬಲಕಟ್ಟಿ, ನಿಲೋಗಲ್ ಗ್ರಾಮ ಪಂಚಾಯತಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನೆಡಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು, ವಸತಿ ಯೋಜನೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ , ರೇಷ್ಮೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಆರ್ಡಬ್ಲ್ಯುಎಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಎನ್.ಆರ್.ಎಲ್.ಎಮ್ ಯೋಜನೆ ಹಾಗೂ ಇತರೆ ಇಲಾಖೆಯ ಯೋಜನೆ ಕುರಿತಿ ಪ್ರಗತಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ದಿಶಾ ಸಮಿತಿಯ ಸದಸ್ಯರಾದ ದೊಡ್ಡ ಬಸವನಗೌಡ ಬಯ್ಯಾಪುರ್, ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷರಾದ ಫಾರೂಕ್ ಡಲಾಯತ್, ಪ್ರಕಾಶ್ ವಿ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಕೊಪ್ಪಳ, ಪಂಪಾಪತಿ ಹಿರೇಮಠ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ., ತಹಸೀಲ್ದಾರ್ ಅಶೋಕ್ ಶಿಗ್ಗಾವಿ, ಡಾ. ಆನಂದ ಗೊಟೂರು ತಾಲೂಕ ಅರೋಗ್ಯಧಿಕಾರಿ, ನಿಂಗನಗೌಡ ವಿ ಹೆಚ್ ಸಹಾಯಕ ನಿರ್ದೇಶಕರು (ಗ್ರಾ.ಉ), ಗೀತಾ ಅಯ್ಯಪ್ಪ ಸಹಾಯಕ ನಿರ್ದೇಶಕರು (ಪಿ.ಆರ್ ), ತಾಲೂಕ ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಹನುಮನಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸುಜಾತ ತವರಪ್ಪ ಸೇರಿದಂತೆ ಉಪಾಧ್ಯಕ್ಷರು, ಸರ್ವ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.