20240715_123406

ಅಧಿಕಾರಿಗಳು ಹೊಣೆ ಅರಿತು ಕಾರ್ಯನಿರ್ವಹಿಸಬೇಕು : ಎಂ.ಎಸ್.ದಿವಾಕರ

ಕರುನಾಡ ಬೆಳಗು ಸುದ್ದಿ

ಜಯನಗರ, 15- ಸರ್ಕಾರದ ಪ್ರತಿಯೊಂದು ಯೋಜನೆಗಳ ಅನುಷ್ಠಾನದ ಮಹತ್ವದ ಹೊಣೆಗಾರಿಕೆಯನ್ನು ಹೊಂದಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲನಲ್ಲಿ ಜುಲೈ 15ರಂದು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಳೆದ ವಾರ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಹತ್ತಾರು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳು ಸಭೆಯಲ್ಲಿ ತಿಳಿಸಿದಂತೆ ಕಾರ್ಯಪ್ರವೃತ್ತರಾಗಲು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಸಹಕಾರ, ಸಮನ್ವಯ ಅತೀಅವಶ್ಯಕವಾಗಿದೆ ಎಂದು ತಿಳಿಸಿದರು.

ಅಧಿಕಾರಿಗಳು ಸಹ ಜನಪ್ರತಿನಿಧಿಗಳ ಹಾಗೆ ಜನ ಸೇವಕರು ಎಂಬುದಾಗಿ ತಿಳಿಯಬೇಕು. ಕಾರ್ಯಾಂಗ ಮತ್ತು ಶಾಸಕಾಂಗ ಈಗ ಮತ್ತಷ್ಟು ಗುಣಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಮಾಹಿತಿಯು ಅಧಿಕಾರಿಗಳ ಅಂಗೈಯಲ್ಲಿರುವAತೆ ಮಾಹಿತಿಯೊಂದಿಗೆ ಕೆಲಸ ಮಾಡಬೇಕು ಎಂಬುದಾಗಿ ಸಭೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತಿಳಿಸಿದ್ದಾರೆ. ಅದರಂತೆ ಎಲ್ಲ ಅಧಿಕಾರಿಗಳು ಸಹ ಗುಣಾತ್ಮಕವಾಗಿ ಕಾರ್ಯನಿರ್ವಹಿಸಿ ಜಿಲ್ಲಾಡಳಿತಕ್ಕೆ ಮತ್ತಷ್ಟು ಬಲ ತುಂಬಬೇಕಿದೆ ಎಂದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯ ಬಗ್ಗೆ ವಿವರಿಸಿದರು.

ಸರ್ಕಾರದ ಆದೇಶ ಪಾಲಿಸದಿದ್ದಲ್ಲಿ, ಕಡತ ವಿಲೇವಾರಿ ಮಾಡದೇ ಜನರಿಗೆ ಸ್ಪಂದಿಸದೇ ಇರುವುದು ಕಂಡು ಬಂದಲ್ಲಿ, ಹೇಳುವ ಯಾವುದೇ ಕೆಲಸದ ಬಗ್ಗೆ ಉದಾಸೀನ ಮಾಡುವುದು, ನಿರ್ಲಕ್ಷö್ಯ ಮಾಡುವುದು ತಿಳಿದು ಬಂದಲ್ಲಿ, ಮೇಲಿಂದ ಮೇಲೆ ಕರ್ತವ್ಯಲೋಪ ಎಸಗುವುದು ಸಾಬೀತಾದಲ್ಲಿ ಯಾವುದೇ ಮುಲಾಜಿಲ್ಲದೇ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಉತ್ತಮವಾಗಿ ಕಾರ್ಯ ಮಾಡುವುದರ ಮೂಲಕ ಸಾರ್ವಜನಿಕರು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಬಡವರು ಕೃಷಿ ಕಾರ್ಮಿಕರು ನೊಂದವರ ಬಗ್ಗೆ ಅನುಕಂಪ, ಅಂತಃಕರಣವಿಟ್ಟುಕೊAಡು ಕೆಲಸ ನಿರ್ವಹಿಸಬೇಕು. ಅರ್ಜಿದಾರರು ಅನವಶ್ಯಕವಾಗಿ ಕಚೇರಿಗೆ ಅಲೆಯುವಂತೆ ಮಾಡಬಾರದು. ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದು, ನಿಯಮಾನುಸಾರ ಕಾಲಮಿತಿಯೊಳಗೆ ಕಡತ ವಿಲೇವಾರಿಯಂತಹ ಕಾರ್ಯಗಳ ಮೂಲಕ ಅಧಿಕಾರಿಗಳು ತಮ್ಮ ಕಚೇರಿಯಲ್ಲಿನ ಸಿಬ್ಬಂದಿಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲೆಗೆ ಹೊಸದಾಗಿ ಬರುವ ಅಧಿಕಾರಿಗಳು, ಜಿಲ್ಲೆಯ ಸಾಕ್ಷರತಾ ಪ್ರಮಾಣ, ಶಿಕ್ಷಣ ಮತ್ತು ತಲಾ ಆದಾಯ ಸೇರಿದಂತೆ ಜಿಲ್ಲೆಯ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಕಡತಗಳ ವಿಲೇವಾರಿಯನ್ನು ಅತ್ಯಂತ ಚುರುಕಾಗಿ ಮಾಡಬೇಕು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ ಇಲಾಖೆಯ ಅಧಿಕಾರಿಗಳು ಕಾಲಕಾಲಕ್ಕೆ ಜಿಲ್ಲೆಯ ರೈತರ ಸಭೆ ಕರೆದು ಅವರಿಗೆ ನಾನಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸಕಾಲಕ್ಕೆ ಬೀಜ, ಗೊಬ್ಬರ ವಿತರಣೆಗೆ ಕ್ರಮ ವಹಿಸಬೇಕು. ರೈತರ ಆತ್ಮಹತ್ಯೆಯಂತಹ ಪ್ರಕರಣಗಳಲ್ಲಿ ವಿಳಂಬ ಮಾಡದೇ ಪಾರದರ್ಶಕತೆ ಕಾಯ್ದುಕೊಂಡು ಬೇಗನೆ ಪರಿಹಾರ ದೊರಕುವಂತೆ ಮಾಡಿ ಸಂತ್ರಸ್ಥರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಬೇಕು. ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡುಗಳು ಸಿಗುವ ಹಾಗೆ ಆಹಾರ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರಾಯುಕ್ತರಿಗೆ ಸೂಚನೆ: ಮಳೆಗಾಲ ಆರಂಭವಾಗಿದ್ದರಿAದ ಅಲ್ಲಲ್ಲಿ ತಗ್ಗು ಗುಂಡಿಗಳು ಬಿದ್ದು ಪೈಪು ಒಡೆದು ಅದರಲ್ಲಿ ಕಲುಷಿತ ನೀರು ಸೇರಿ ಕಾಲರಾ, ವಾಂತಿ ಬೇಧಿ ಉಂಟಾಗಿ ಜನರ ಜೀವನಕ್ಕೆ ಕುತ್ತು ಬಾರದ ಹಾಗೆ ನಗರಸಭೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ನಿರಂತರವಾಗಿ ನಗರ ಸಂಚಾರ ಕೈಗೊಂಡು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.

ನಗರವಾಸಿಗಳಿಗೆ ಕಾಲಕಾಲಕ್ಕೆ ಮೂಲಭೂತ ಸೌಕರ್ಯ ಸಿಗುವ ನಿಟ್ಟಿನಲ್ಲಿ ನಗರಸಭೆಯಿಂದ ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಕೆಲಸ ಕಾಮಗಾರಿಗಳು ಕಾಲಮಿತಿಯೊಳಗೆ ನಡೆದು ಪೂರ್ಣವಾಗಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆಗೆ ಸೂಚನೆ: ಡೆಂಗೆಯನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವೈದ್ಯಾಧಿಕಾರಿಗಳು ತಾಲೂಕು ಮಟ್ಟದ ವೈದ್ಯಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸಬೇಕು. ಮಳೆಗಾಲ ಹಿನ್ನೆಲೆಯಲ್ಲಿ ಡೆಂಗೆ ಜೊತೆಗೆ ಬೇರೆ ಬೇರೆ ಕಾಯಿಲೆಗಳು ಉಲ್ಬಣಿಸುತ್ತಿದ್ದು ಬೇರೆ ಬೇರೆ ಕಾಯಿಲೆಯಿಂದ ಬಳಲಿ ಸಾರ್ವಜನಿಕರು ಆಸ್ಪತ್ರೆಗೆ ಬಂದಲ್ಲಿ ಬೆಡ್ ಭರ್ತಿ ನೆಪದಲ್ಲಿ ಯಾರನ್ನು ವಾಪಾಸು ಕಳಿಸಬಾರದು ಎಂದರು.

ಜನಸ್ಪAದನ ಅರ್ಜಿಗಳ ವಿಲೇಗೆ ಕ್ರಮ ವಹಿಸಿ: ಅಧಿವೇಶನ ಮುಗಿದ ಬಳಿಕ ಎಲ್ಲ ಜಿಲ್ಲೆಗಳಲ್ಲಿ ಪುನಃ ಜನಸ್ಪಂದನಮ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಕಡೆಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗಿದೆ. ಅಲ್ಲಿ ಸ್ವೀಕೃತಿಯಾದ ಅರ್ಜಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ವಿಲೇವಾರಿ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ತುರ್ತಾಗಿ ಕ್ರಮ ವಹಿಸಬೇಕು ಎಂದು ಜಿಲ್ಲಾದಿನüಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಮಾಹಿತಿ ನೀಡಿ: ಅಂಗನವಾಡಿಗಳಿಗೆ ಜಮೀನು ಇಲ್ಲ, ನಿವೇಶನ ಇಲ್ಲ. ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನಿಲ್ಲ ಎನ್ನುವಂತಹ ಬೇಡಿಕೆಗಳು, ಮನವಿಗಳು ಜನಸ್ಪಂದನದAತಹ ಸಭೆಗಳಲ್ಲಿ ಮತ್ತೆ ಮತ್ತೆ ಬರುತ್ತವೆ. ಜಮೀನು ಬೇಕು ಎಂದು ತಾಲೂಕುಮಟ್ಟದಲ್ಲಿನ ಸಿಡಿಪಿಓ ಮತ್ತು ಇನ್ನಿತರ ಇಲಾಖೆಯ ಅಧಿಕಾರಿಗಳು ಒಂದು ಪತ್ರ ಬರೆದು ಸುಮ್ಮನೆ ಕೂಡಬಾರದು. ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನಿವೇಶನ, ಜಮೀನು ಮಂಜೂರಾತಿಗೆ ಅಗತ್ಯ ಕ್ರಮವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇನ್ನೀತರೆ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಸೂಚನೆ ನೀಡಿದರು.

ಪಶುಪಾಲನೆ ಇಲಾಖೆಗೆ ಸೂಚನೆ: ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನವಿದೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಕುರಿ ಮೇಕೆಗಳಿಗೆ ತೊಂದರೆಯಾದಲ್ಲಿ ವಿಳಂಬ ಮಾಡದೇ ಕುರಿ ಮೇಕೆಗಳಿರುವಲ್ಲಿಗೆ ತೆರಳಿ ಲಸಿಕೆ ಮತ್ತು ಚುಚ್ಚುಮದ್ದು ಕೊಡಬೇಕು. ಕುರಿ ಕಳ್ಳತನ ತಡೆಯಲು ಬಂದೂಕು ಲೈಸೆನ್ಸ್ ನೀಡಬೇಕು ಎನ್ನುವ ಮನವಿಗೆ ಕೂಡಲೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಸಹಾಯಕ ಆಯುಕ್ತರಾದ ಚಿದಾನಂದ ಗುರುಸ್ವಾಮಿ, ನಗರಸಭೆ ಪೌರಾಯುಕ್ತರಾದ ಮನೋಹರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಇದ್ದರು.

Leave a Reply

Your email address will not be published. Required fields are marked *

error: Content is protected !!