
ಕನ್ನಡ ರಾಜ್ಯೋತ್ಸವದ ಪೂರ್ವಭಾವಿ
ಸಭೆ ಅನ್ಯ ಭಾಷೆಯ ನಾಮಫಲಕ
ತೆರವುಗೊಳಿಸಲು ಕನ್ನಡಪರ ಸಂಘಟನೆಗಳು ಆಗ್ರಹ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ , 26 – ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಪಟ್ಟಣದ ತಹಶಿಲ್ದಾರ ಕಛೇರಿಯಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವ ಆಚರಿಸುವ ಕುರಿತು ಪೂವ೯ಭಾವಿ ಸಭೆಯು ಬೆಳಿಗ್ಗೆ 10-30 ಕ್ಕೆ ಪ್ರಾರಂಭಗೊಂಡ ತಹಶೀಲ್ದಾರ ಬಸವರಾಜ ತೆನ್ನಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಲು ಕೆಲವು ರೂಪುರೇಷೆಗಳನ್ನು ಸಂಗ್ರಹಿಸಲಾಯಿತು.
ಕನ್ನಡ ರಾಜ್ಯೋತ್ಸವ ಕನ್ನಡಿಗರ ಸಂಭ್ರಮದ ಹಬ್ಬ. ಕರ್ನಾಟಕ ಏಕೀಕರಣವಾಗಿ 50 ವರ್ಷಗಳು ಗತಿಸಿದ ಸವಿ ನೆನಪಿನಲ್ಲಿ ರಾಜ್ಯ ಸರ್ಕಾರ ಸುವರ್ಣ ಮಹೋತ್ಸವ
ಕಾರ್ಯಕ್ರಮವನ್ನುಅಚ್ಚುಕಟ್ಟು ಆಗಿ ಆಚರಿಸಲು ನಿರ್ಧರಿಸಿದೆ.ಇದಕ್ಕೆ ಎಲ್ಲರ ಸಹಕಾರ ಬಹಳ ಮುಖ್ಯ ಎಂದು ಹೇಳಿದರು.
ನಂತರ ಕನ್ನಡ ಪರ ಹೋರಾಟ ಗಾರ ರಾಜಶೇಖರ ಶ್ಯಾಗೋಟಿ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡ ಅಭಿಮಾನಿಗಳ ವಿಜ್ರಂಭಣೆಯಿಂದ ಆಚರಿಸುವ ಹಬ್ಬ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು. ನಾಡು ನುಡಿ, ಕಲೆ ,ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಗುರುತಿಸಿ ಗೌರವಿಸಬೇಕು.
ತಾಲೂಕಿನ ಪ್ರತಿಯೊಂದು ಶಾಲೆಗಳಲ್ಲಿ ರಾಜ್ಯೋತ್ಸವ ಆಚರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಈ ವಷ೯ 50 ನೇಯ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಪಟ್ಟಣದ ಮನೆ ಮನೆಗಳ ಮೇಲೆ ಅಂಗಡಿಗಳ ಮೇಲೆ ಕನ್ನಡ ಬಾವುಟ ರಾರಾಜಿಸಬೇಕು ಎಂದು ಕರ್ನಾಟಕಕ ರಕ್ಷಣಾ ವೇದೀಕೆ ಮುಖಂಡ ಶಿವಕುಮಾರ ನಾಗನಗೌಡ್ರ ಮಾತನಾಡಿದರು.
ನಂತರ ವಾಲ್ಮೀಕಿ ಸಮುದಾಯದ ಮುಖಂಡ.ಮತ್ತು ಪತ್ರಕರ್ತರಾದ. ಶ್ರೀ ಕಾಂತಗೌಡ ಮಾಲಿಪಾಟೀಲ ಮಾತನಾಡಿದ ಅವರು ಶಾಲಾ ಮಕ್ಕಳಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು .ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು ಪಟ್ಟಣದಲ್ಲಿನ ಎಲ್ಲಡೆ ಕನ್ನಡ ಇಲ್ಲದ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ. ಸೂಚಿಸಿದರು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ತಮ್ಮೆಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ತಾಲೂಕಿನಲ್ಲಿ ಕಾರ್ಯಕ್ರಮವನ್ನು ಒಳ್ಳೆಯ ರೀತಿಯಲ್ಲಿ ಮಾಡಲು ಪ್ರಯತ್ನಿಸುತ್ತೇವೆ ಶಾಲೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವದು ಮತ್ತು ಕನ್ನಡ ನಾಡು-ನುಡಿ, ಕಲೆ ಸಂಸ್ಕೃತಿ ಗೆ ಸಂಭದಿಸಿದಂತೆ ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳ ರೂಪರೇಷಗಳನ್ನು ತಯಾರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳೆ ಸೂಚಿಸಿದರು ಕಾರ್ಯಕ್ರಮ ಅರ್ಥಪೂರ್ಣವಾಗುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತ್ತು ಎಂದು ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ತಿಳಿಸಿದರು.
ಈ ಸಂದರ್ಭದಲ್ಲಿ ಕರವೆ ಮುಖಂಡ ಶಂಕರ ಮೂಲಿಮನಿ,ಅಧಿಕಾರಿಗಳಾದ ಗ್ರೇಡ್ 2 ತಹಶಿಲ್ದಾರ ನಾಗಪ್ಪ ಸಜ್ಜನ್, ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ಹಾದಿಮನಿ ಅಕ್ಷರ ದಾಸೋಹ ಅಧಿಕಾರಿ ಎಫ್. ಎಂ.ಕಳ್ಳಿ.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಿಂಗನಗೌಡ್ರ ,ಸಾರಿಗೆ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ,ಪಶು ಇಲಾಖೆಯ ಚಿತ್ರಗಾರ, ಶ್ರೀಧರಗೌಡ,ಹನಮಗೌಡ ಪಾಟೀಲ್
ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು,ಮತ್ತು ಇತರರು ಭಾಗವಹಿಸಿದ್ದರು.