ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,10- ಲೋಕಸಭಾ ಚುನಾವಣೆ-2024 ರ ಸಂಬAಧ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು ರೂ. 50,61,464 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬAಧಿಸಿದAತೆ 127 ಜನರನ್ನು ಬಂಧಿಸಲಾಗಿದೆ.
ಪ್ರಕರಣಗಳಲ್ಲಿ 4286.190 ಲೀ. ಮದ್ಯದ ಜೊತೆಗೆ 1 ಲಾರಿ, 1 ಒಮಿನಿ ವ್ಯಾನ್ ಹಾಗೂ 23 ದ್ವಿಚಕ್ರ ವಾಹನಗಳು ಸೇರಿದಂತೆ 25 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತು ಮಾಡಲಾದ ವಸ್ತುಗಳ ಒಟ್ಟು ಮೌಲ್ಯ ರೂ. 50,61,464 ಆಗಿದ್ದು, ಚುನಾವಣಾ ಅಕ್ರಮ ತಡೆಯುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿರಂತರ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
