
ಸಚಿವ ನಾಗೇಂದ್ರ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 19- ಇಂದು ಜಿಲ್ಲಾ ಉಸ್ತುವಾರಿ ಸಚಿವ, ಬಿ ನಾಗೇಂದ್ರ ಅವರಿಂದ ಅಭಿವೃದ್ಧಿ ಕಾರ್ಯ ಗಳಿಗೆ ಭೂಮಿ ಪೂಜೆ ಮಾಡಲಾಯಿತು.
ತಾಲೂಕ ವ್ಯಾಪ್ತಿಯಲ್ಲಿ ಬರುವ ಡಿ ನಾಗೇನಹಳ್ಳಿ ಯಲ್ಲಿ ಸಚಿವ ಬಿ ನಾಗೇಂದ್ರ ಅವರು ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಇವರ ಆಶ್ರಯದಲ್ಲಿ ಕೈಗೊಳ್ಳುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉನ್ನತೀಕರಿಸಿದ ಕೂಸಿನ ಮನೆ ಉದ್ಘಾಟಿಸಿದರು. ಬಳಿಕ ಅಲ್ಲಿನ ಮಕ್ಕಳಿಗೆ ಸಿಹಿತಿನಿಸಿ ಮಕ್ಕಳೊಂದಿಗೆ ಕೆಲವು ಕ್ಷಣ ಸಂಭ್ರಮಿಸಿದರು. ಗ್ರಾಮದಲ್ಲಿ ಸಂಚರಿಸಿದ ಸಚಿವ ಗ್ರಾಮಸ್ಥರೊಂದಿಗೆ ಗ್ರಾಮದ ಸಮಸ್ಯೆಗಳ ಬಗ್ಗೆ ವಿಚಾರಿಸಿದರು.
ನಂತರ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿ ಜನರಿಂದ ಸಮಸ್ಯೆಗಳ ಹುವಾಲುಗಳನ್ನು ಸ್ವೀಕರಿಸಿದರು ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಗ್ರಾಮೀಣ ಪ್ರಾಂತಗಳ ಅಭಿವೃದ್ಧಿಗೆ ತಮ್ಮ ಸರ್ಕಾರ ಬೇಕಾದಂತ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು ಗ್ರಾಮದ ಈಶ್ವರ ದೇವಸ್ಥಾನ ಪ್ರಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವರ ನೇತೃತ್ವದಲ್ಲಿ ಮನೆಬಾಗಲಿಗೆ ಸರ್ಕಾರ ಎಂಬುವ ಯೋಜನೆಯಿಂದ ಸಾಮಾನ್ಯ ಜನರ ಕುಂದು ಕೊರತೆಗಳನ್ನು ಆಲೋಕಿಸಲು ಅಧಿಕಾರಿಗಳಿಗೆ ಮತ್ತೆ ಶಾಸಕರು ಸಚಿವರಿಗೆ ಅಪೂರ್ಣ ಅವಕಾಶ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಮತ್ತು, ಕಾಂಗ್ರೆಸ್ ಪಕ್ಷದ ನಾಯಕರು, ವಿವಿಧ ವಿಭಾಗಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.