
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 27- 2024-25ನೇ ಸಾಲಿಗಾಗಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ / ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಗಂಗಾವತಿಯ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಗಂಗಾವತಿ ತಾಲ್ಲೂಕಿನ ಬಸಾಪಟ್ಟಣದ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳ ಪ್ರವೇಶಕ್ಕಾಗಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲೆಗಳನ್ನು ಸಂಬAಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ದೂ.ಸಂ.08539-225070 ಹಾಗೂ ಎಲ್ಲಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳು ಮತ್ತು ಹತ್ತಿರದ ವಸತಿ ನಿಲಯಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.