2c136fae-be38-4577-97e1-318669006cc9

ಅಲ್ಪಸಂಖ್ಯಾತರ ವಸತಿ ಕಾಲೇಜು ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 17- ವಿಜಯನಗರ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ಬಾಲಕ, ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2024-25ನೇ ಶೈಕ್ಷಣಿಕ ವರ್ಷಕ್ಕೆ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಪ್ರಥಮ ಪಿಯುಸಿಗೆ ಉಚಿತವಾಗಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75ರಷ್ಟು ಹಾಗೂ ಇತರೆ ಸಮುದಾಯಕ್ಕೆ ಶೇ.25ರಷ್ಟು ಮೀಸಲಾತಿ ಇದ್ದು ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಮೇ27 ಕೊನೆಯ ದಿನವಾಗಿರುತ್ತದೆ.

ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರು ವಸತಿ ಶಾಲೆ ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ಪಡೆದು ಸಲ್ಲಿಸಬಹುದಾಗಿದೆ.

ಮಾಹಿತಿ ಕೇಂದ್ರಗಳ ವಿವರ: ಹೊಸಪೇಟೆ ತಾಲ್ಲೂಕಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮೊ:9901302904, ಕೂಡ್ಲಿಗಿ ತಾಲ್ಲೂಕಿನ ತಾಯಕನಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ:9964915789, ಹೊಸಪೇಟೆಯ ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಮೊ:8073250473., ಹರಪನಹಳ್ಳಿ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿಗಳು ಮೊ:7676621339., ಜಿಲ್ಲಾ ಮಾಹಿತಿ ಕೇಂದ್ರ ಹೊಸಪೇಟೆ ಮೊ:8050435366., ಕೂಡ್ಲಿಗಿ ತಾಲ್ಲೂಕು ಮಾಹಿತಿ ಕೇಂದ್ರ ಮೊ:9060330060., ಹಗರಿಬೊಮ್ಮನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ಮೊ:9980237242., ಹರಪನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ಮೊ:8494927891., ಹಡಗಲಿ ತಾಲ್ಲೂಕು ಮಾಹಿತಿ ಕೇಂದ್ರ ಮೊ:7353696984ಗೆ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯ, ಎಸ್.ಎಮ್.ಎಸ್.ಕೆ ಪ್ಲಾಜಾ ಗುಗ್ರೀ ನರ್ಸಿಂಗ್ ಹೋಮ್ ಪಕ್ಕದಲ್ಲಿ ಅಂಬೇಡ್ಕರ್ ಸರ್ಕಲ್ ಹತ್ತಿರ (ಹೊಸಪೇಟೆ)ವಿಜಯನಗರ ಕಚೇರಿ ದೂರವಾಣಿ :08394-200206 ಅಥವಾ 24*7 ಸಹಯವಾಣಿ ಕೇಂದ್ರ ಮೊ:8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!