DSC_0592

ಆನೆಗೊಂದಿ ಉತ್ಸವ : ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,9- ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾರ್ಚ್ 9ರಂದು ಆಕರ್ಷಕ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಜರುಗಿತು.

ಮಾ.11 ಮತ್ತು 12ರಂದು ನಡೆಯಲಿರುವ ಆನೆಗೊಂದಿ ಉತ್ಸವ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗಂಗಾವತಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ವಿವಿಧ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ವಿವಿಧ ತಂಡಗಳಿಂದ ನೋಂದಾಯಿಸಲಾಗಿತ್ತು. ವಿದ್ಯಾರ್ಥಿಗಳು, ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳನ್ನು ವೀಕ್ಷಿಸಿದರು.

 

Leave a Reply

Your email address will not be published. Required fields are marked *

error: Content is protected !!