
ಆಯೋಗದ ಅಧ್ಯಕ್ಷರು, ಸದಸ್ಯರ ಪ್ರವಾಸ ನಿಗದಿ : ಅಧಿಕಾರಿಗಳಿಗೆ ಸೂಚನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 4- ಮಾನವ ಹಕ್ಕುಗಳ ಆಯೋಗದಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣ ಕುರಿತು ಸಂಬAಧಪಟ್ಟ ಪ್ರಾಧಿಕಾರಿಗಳಿಂದ ಮಾಹಿತಿ ವರದಿ ಪಡೆದು ಕ್ರೋಢೀಕೃತ ಪಟ್ಟಿ ತಯಾರಿಸಿ ಆಯೋಗದ ಸಿಟ್ಟಿಂಗ್ಸ್ ಸಂದರ್ಭದಲ್ಲಿ ಸಲ್ಲಿಸಲು ಕ್ರಮ ವಹಿಸಬೇಕು. ಸಂಬಂಧಪಟ್ಟ ಪ್ರಾಧಿಕಾರಿಗಳ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯ ಹಾಜರಾಗಿ ಸಮನ್ವಯ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಪ್ರವಾಸ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿ ಜುಲೈ 10 ರಂದು ನಿಗದಿಯಾಗಿದೆ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಅಂದು ಸಿಟ್ಟಿಂಗ್ಸ್ ನಡೆಸುವುದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಪರಿಶೀಲಿಸಿ ಇತ್ಯರ್ಥಪಡಿಸುವರು. ಜೊತೆಗೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಸ್ಥಳೀಯ ಪರಿವೀಕ್ಷಣೆ ನಡೆಸಲಿದ್ದಾರೆ.
ಸರ್ಕಾರದ ವಿವಿಧ ಸೌಲಭ್ಯಗಳ ಮಾಹಿತಿ, ಬಡವರಿಗೆ ವಸತಿ ಸೌಕರ್ಯ ಕಲ್ಪಿಸಿರುವ ಬಗ್ಗೆ, ಕಟ್ಟಡ ನಿರ್ಮಾಣ ಕಾರ್ಮಿಕರ ಸೌಲಭ್ಯಗಳು, ದೇವದಾಸಿ ಪದ್ಧತಿಯಲ್ಲಿ ನೊಂದವರಿಗೆ ಪುನರ್ವಸತಿ ಸೌಕರ್ಯ ಕಲ್ಪಿಸಿದ ಬಗ್ಗೆ, ಲೈಂಗಿಕ ಶೋಷಣೆಗೆ ಒಳಗಾದವರು, ಲೈಂಗಿಕ ಕಾರ್ಯಕರ್ತರಿಗೆ ಸಂಬಂಧಿಸಿದ ಪುನರ್ವಸತಿ ವಿಷಯಗಳು, ಲೈಂಗಿಕ ಅಲ್ಪಸಂಖ್ಯಾತರಿಗೆ ಒದಗಿಸಿರುವ ಸೌಕರ್ಯಗಳು, ಪಾದಾಚಾರಿ ಮಾರ್ಗಗಳನ್ನು ಅತಿಕ್ರಮಣ ಮಾಡಿಕೊಂಡಿರುವ ಬಗ್ಗೆ, ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹೊರಡಿಸಲಾಗಿರುವ ಸಂಬಂಧಿಸಿದ ಕಾಯಿದೆಗಳು, ನೀತಿ ನಿಯಮಗಳು, ಇತರೆ ಮಾರ್ಗಸೂಚಿ ಪ್ರತಿಗಳನ್ನು ಹಾಗೂ ಸೌಲಭ್ಯ ವಿಸ್ತರಿಸಿರುವ ಬಗ್ಗೆ ಅಂಕಿ ಅಂಶಗಳ ಮಾಹಿತಿಯನ್ನು ಒದಗಿಸಬೇಕು.
ಸರ್ಕಾರದ ವಿವಿಧ ಯೋಜನೆಗಳ ವಿವರಗಳು ಹಾಗೂ ಅವುಗಳಿಗೆ ಮಂಜೂರಾಗಿರುವ ಅನುದಾನ ಹಾಗೂ ಫಲಾನುಭವಿಗಳಿಗೆ ಅಂಕಿ ಅಂಶಗಳ ವಿವರಗಳನ್ನು ಸಂಬAಧಿಸಿದ ಅಧಿಕಾರಿಗಳು ಆಯೋಗಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.