WhatsApp Image 2024-02-23 at 4.24.32 PM

ದರೂರು, ಕರೂರು ಗ್ರಾಮಗಳಲ್ಲಿ ಆರೋಗ್ಯ ಸೇವೆಗಳ ಬೀದಿ ನಾಟಕ ಜಾಗೃತಿ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,23- ತಾಲೂಕು ದರೂರು ಮತ್ತು ಕರೂರು ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ಮತ್ತು ಸಾರ್ವತ್ರಿಕ ಆರೋಗ್ಯ ರಕ್ಷಣೆ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮಗಳ ಕುರಿತು ಆರೋಗ್ಯ ಕೇಂದ್ರಗಳಲ್ಲಿ ಕಲಾ ತಂಡಗಳಿಂದ ಎರಡು ಗ್ರಾಮಗಳಾದ ಕರೂರು ದರೂರುಗಳಲ್ಲಿ ಪ್ರತ್ಯೇಕವಾಗಿ ಬೀದಿ ನಾಟಕ ಪ್ರದರ್ಶಿಸಲಾಯಿತು.

ಆರೋಗ್ಯ ಇಲಾಖೆಯ ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸರ್ಕಾರದ ಸೇವೆಗಳ ಯೋಜನೆಗಳ ಕುರಿತು ರಾತ್ರಿ ರಂಗ ಸಂಸ್ಥೆ ಸಿರಿಗೇರಿ ಕಲಾ ತಂಡದ ಕಲಾವಿದರು ಉತ್ತಮವಾಗಿ ಅಭಿನಯಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ದರೂರು ಗ್ರಾಮದ ಆರೋಗ್ಯ ಅಧಿಕಾರಿ ಶ್ವೇತಾ, ಆಶಾ ಕಾರ್ಯಕರ್ತರು ಹಾಗೂ ಸಂಘಟನೆಗಳ ಮುಖಂಡರು, ಸಾರ್ವಜನಿಕರು, ಇದ್ದರು ಕರೂರು ಗ್ರಾಮದಲ್ಲಿ ನಡೆದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಆರೋಗ್ಯ ಅಧಿಕಾರಿಗಳಾದ ವೆಂಕಪ್ಪ, ಅರುಣ ಮತ್ತು ಆಶಾ ಕಾರ್ಯಕರ್ತರು, ಗ್ರಾಮಸ್ಥರು, ಯುವಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!