
ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 19- ಆಸೆ ಆಮಿಷಗಳಿಗೆ ಒಳಗಾಗದೇ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತವನ್ನು ಚಲಾಯಿಸುವಂತೆ ಕೂಲಿಕಾರರಿಗೆ ಕನಕಗಿರಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳಿದರು.
ಕನಕಗಿರಿ ತಾಲೂಕಿನ ಜೀರಾಳ ಗ್ರಾ.ಪಂ ವತಿಯಿಂದ ಗ್ರಾಮದ ಕೂಲಿಕಾರರಿಗೆ ನೀಡಲಾಗಿದ್ದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಶುಕ್ರವಾರದಂದು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಪಂಚದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾದ ನಮ್ಮ ದೇಶದಲ್ಲಿ ಸಂವಿಧಾನ ನಮ್ಮೆಲ್ಲರಿಗೂ ನೀಡಿರುವ ಒಂದು ಹಕ್ಕು ಮತದಾನ. ಅದನ್ನು ಎಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಬೇಕು ಎಂದರು.
ನAತರ ಸಹಾಯಕ ನಿರ್ದೇಶಕರು ಮಾತನಾಡಿ, ಬೇಸಿಗೆ ಇರುವುದರಿಂದ ಯಾರು ಗುಳೆ ಹೋಗದೇ, ನಿಮ್ಮೂರಲ್ಲೇ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಯೋಜನೆಯ ಸದುಪಯೋಗ ಪಡೆಯಲು ತಿಳಿಸಿದರು. ಜೊತೆಗೆ ಸಮುದಾಯ ಕಾಮಗಾರಿಯಷ್ಟೇ ಅಲ್ಲದೇ, ವೈಯಕ್ತಿಕ ಕಾಮಗಾರಿಗಳ ಪ್ರಯೋಜನ ಪಡೆಯಲು ತಿಳಿಸಿದರು.
ಬಳಿಕ ಗ್ರಾ.ಪಂ ಪಿಡಿಓ ರವರು ಕೂಲಿಕಾರರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ವೇಳೆ ತಾಲೂಕು ಐಇಸಿ ಸಂಯೋಜಕರು, ಬಿಎಫ್.ಟಿ ಸೇರಿದಂತೆ ಗ್ರಾ.ಪಂ ಸಿಬ್ಬಂದಿ ಹಾಗೂ ಕೂಲಿಕಾರರು ಹಾಜರಿದ್ದರು.