2c136fae-be38-4577-97e1-318669006cc9

ಆಸ್ತಿಗಳಿಗೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಸಿ ಉತ್ತೇಜಿಸಿ ಅಭಿವೃದ್ಧಿಗೆ ಸಹಕರಿಸಿ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 5- ನಗರ ಸಭೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಸ್ವಯಂಘೋಷಿತ ಆಸ್ತಿ ತೆರಿಗೆ ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರ ಸಭೆಗಳ ಅಧಿನಿಯಮ 1964ರ ಕಲಂ 105/1 ರನ್ವಯ ಸಿರುಗುಪ್ಪ ನಗರಸಭೆಯಲ್ಲಿ ಆರ್ಥಿಕ ವರ್ಷದ ಏಪ್ರಿಲ್ 2024ರ ತಿಂಗಳಲ್ಲಿ ಪೂರ್ಣ ಪ್ರಮಾಣದ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಘನ ಸರ್ಕಾರ 31 ಜುಲೈ 2024 ರ ಒಳಗೆ ನಗರ ಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ಮಾಲೀಕರು ತಮ್ಮ ತಮ್ಮ ಆಸ್ತಿಗಳ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗುವುದು ಸಾರ್ವಜನಿಕರು ಅವಕಾಶವನ್ನು ಬಳಸಿ ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಲು ಸಿರುಗುಪ್ಪ ನಗರಸಭಾ ಆಡಳಿತ ಅಧಿಕಾರಿಗಳು ಹಾಗೂ ಬಳ್ಳಾರಿ ಜಿಲ್ಲಾಧಿಕಾರಿಗಳು ನಗರಸಭಾ ಸಿರುಗುಪ್ಪ ಪೌರಾಯುಕ್ತರು ಕೋರಿದ್ದಾರೆ .

Leave a Reply

Your email address will not be published. Required fields are marked *

error: Content is protected !!