
ಇಂಡೋ ಅಮೇರಿಕನ್ ಡಿಗ್ರಿ ಕಾಲೇಜಿನಲ್ಲಿ ಸಂವಿಧಾನ ಕುರಿತು ವಿಶೇಷ ಉಪನ್ಯಾಸ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,29- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಇಂಡೋ-ಅಮೆರಿಕನ್ ಡಿಗ್ರೀ ಕಾಲೇಜ್‍ನಲ್ಲಿ “ಸಂವಿಧಾನ ಜಾಗೃತಿ ಜಾಥಾ” ಅಂಗವಾಗಿ ಸಂವಿಧಾನ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಇಂಡೋ ಅಮೇರಿಕನ್ ಡಿಗ್ರಿ ಕಾಲೇಜು ಪ್ರಾಚಾರ್ಯರಾದ ಶೇಖ್ ಸಲೀಮ್ ಬಾಷಾ ಅವರು ಅಂಬೇಡ್ಕರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಅರಿತುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ಭಾರತ ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರ್‍ರವರನ್ನು ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿಯನ್ನು ಮೂಡಿಸಿದರು.
ವಿದ್ಯಾರ್ಥಿಗಳು ಸಂವಿಧಾನದ ಕುರಿತು ಮತ್ತು ಅಂಬೇಡ್ಕರರವರ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ವೇದಿಕೆಯ ಮೇಲೆ ಇರುವ ಅಧಿಕಾರಿಗಳು ನಂತರ ಭಾರತ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಓದಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಎಲ್ಲಾ ಉಪನ್ಯಾಸಕರು, ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.