2c136fae-be38-4577-97e1-318669006cc9

ಇಂಧನ ದಕ್ಷತಾ ಕ್ರಮ : 18ರಂದು ತಾಂತ್ರಿಕ ತರಬೇತಿ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 11- ಪಂಪ್/ ಉಪಕರಣ ತಂತ್ರಜ್ಞರಿಂದ ಇಂಧನ ದಕ್ಷತಾ ಕ್ರಮಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮವನ್ನು ಜುಲೈ 18ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಷ್ಟಗಿ ರಸ್ತೆಯ ಟಣಕನಕಲ್‌ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಎನ್ಸಿ (ಬಿ.ಇ.ಇ) ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್.ಇ.ಡಿ.ಎಲ್) ರವರ ಸಹಯೋಗದೊಂದಿಗೆ “ಪಂಪ್/ ಉಪಕರಣ ತಂತ್ರಜ್ಞರಿಗೆ ಇಂಧನ ದಕ್ಷತಾ ಕ್ರಮಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮ” ಅಡಿಯಲ್ಲಿ ಅನುಭವಿ ಉಪನ್ಯಾಸಕರಿಂದ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಆಸಕ್ತ ಪಂಪ್ ಇಕ್ವೀಪ್‌ಮೆಂಟ್ ಟೆಕ್ನಿಷಿಯನ್ಸ್ ಮತ್ತು ತರಬೇತಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಚಹಾ ಮತ್ತು ಮಧ್ಯಾಹ್ನದ ಬೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಯಾವುದೇ ರೀತಿಯ ಪ್ರಯಾಣ ಭತ್ಯೆ ಅಥವಾ ಇತರೆ ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇವರಿಗೆ ಮೊ.ಸಂ: 9448813422, 9742532353, 9945672606, 9945577155, 9008536895 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!