
ಯುವ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ: ಶ್ರೀಕಾಂತ್ ಟಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,31- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಪ್ರತಿನಿಧಿಗಳನ್ನು ಪ್ರಜೆಗಳು ಆಯ್ಕೆ ಮಾಡುವ ಅವಕಾಶ ಇರುವುದರಿಂದ ಯುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಎಂದು ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಶ್ರೀಕಾಂತ್ ಟಿ. ಅವರು ಹೇಳಿದರು.
ತಾಲೂಕಿನ ಬೇವಿನಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗನಕಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ತಾಲೂಕಾ ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಹಾಗೂ ಇವಿಎಂ, ವಿವಿ ಪ್ಯಾಟ್ ಅಣಕು ಮತದಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಯುಗದಲ್ಲಿ ಯುವ ಪೀಳಿಗೆ ಮತದಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂವಿಧಾನ ಪ್ರಜೆಗಳಿಗೆ ಮತದಾನ ಹಕ್ಕನ್ನು ನೀಡಿದೆ. ಭವಿಷ್ಯದ ಪ್ರಜೆಗಳಾದ ಯುವ ಸಮೂಹ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಸುಭದ್ರ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ನಂತರ ವಿದ್ಯಾರ್ಥಿಗಳಿಗೆ ಇವಿಎಂ, ವಿವಿ ಪ್ಯಾಟ್ ಗಳ ಕುರಿತು ಪ್ರಾತ್ಯಕ್ಷಿಕೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಅಣಕು ಮತದಾನ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಸ್ವೀಪ್ ಸಮಿತಿಯ ಅಜೀಜ್, ಸಂದೀಪ್, ಸೋಮನಾಥ ನಾಯಕ, ಉಪನ್ಯಾಸಕರಾದ ಶೃತಿ, ಶಂಕರಪ್ಪ ಸೇರಿದಂತೆ ತಾ.ಪಂ ಸಿಬ್ಬಂದಿಗಳು ಇದ್ದರು.
.