
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ : ಬಳ್ಳಾರಿ ಜಿಲ್ಲೆ ಸುಸೂತ್ರ ಮತದಾನ, ಶೇ.67.78 ರಷ್ಟು ಮತದಾನ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 4- ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ದಿನವಾದ ಜೂ.03 ಸೋಮವಾರದಂದು ಬಳ್ಳಾರಿ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು. ಅಂತಿಮ ವರದಿಯಂತೆ ಶೇ.67.78 ರಷ್ಟು ಮತದಾನವಾಗಿದೆ.
ಕಂಪ್ಲಿ, ಸಿರುಗುಪ್ಪ, ಬಳ್ಳಾರಿ ಗ್ರಾಮೀಣ, ಬಳ್ಳಾರಿ ನಗರ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 10,555 ಪುರುಷರು, 5,837 ಮಹಿಳೆಯರು ಸೇರಿದಂತೆ 16,392 ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.