
ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 1- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜೂನ್ 13 ರಿಂದ 30 ದಿನಗಳ ಘರೇಲು ವಿದ್ಯುತ್ ಉಪಕರಣ ಸೇವಾ ಉದ್ಯಮಿ(ಹೌಸ್ ವೈರಿಂಗ್) ತರಬೇತಿ ಮತ್ತು ಜೂನ್ 20 ರಿಂದ 13 ದಿನಗಳ ಕೃಷಿ ಉದ್ಯಮಿ ತರಬೇತಿಗಳನ್ನು ನೀಡಲಾಗುತ್ತಿದೆ. ಈ ತರಬೇತಿಗಳಿಗೆ ಹೆಸರು ನೋಂದಾಯಿಸಲು ಜೂನ್ 10 ಕೊನೆಯ ದಿನವಾಗಿದೆ.
ಸಂಸ್ಥೆಯಿAದ 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಹಾಗೂ ಜುಲೈ ತಿಂಗಳಿನಲ್ಲಿ ರೆಫ್ರಿಜರೇಟರ್ ಮತ್ತು ಏರ್ ಕಂಡೀಶನಿAಗ್ ತರಬೇತಿಗಳನ್ನು ನೀಡಲಾಗುತ್ತಿದ್ದು, ಈ ತರಬೇತಿಗಳಿಗೆ ಹೆಸರು ನೋಂದಾಯಿಸಲು ಜೂನ್ 15 ಕೊನೆಯ ದಿನವಾಗಿದೆ.
ಮೇಲ್ಕಂಡ ತರಬೇತಿಗಳ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ. ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನಿಗದಿತ ದಿನಾಂಕದೊಳಗೆ ನೋಂದಾಯಿಸಬೇಕು. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 8217236973, 9483485489, 9632225123, 9980510717 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.