
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಭೇಟಿ
ಕರುನಾಡ ವಬೆಳಗು ಸುದ್ದಿ
ವಿಜಯನಗರ,31- ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ ಅವರು ಮಾರ್ಚ 30ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.
ವಿಜ್ಞಾನ ವಿಷಯದ ಪರೀಕ್ಷೆ : ಮಾರ್ಚ 30ರಂದು ನಡೆದ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 20,419 ವಿದ್ಯಾರ್ಥಿಗಳು ಹಾಜರಾಗಿದ್ದರು. 337 ವಿದ್ಯಾರ್ಥಿಗಳು ಗೈರಾಗಿದ್ದರು. ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2784, ಹೊಸಪೇಟೆ ತಾಲೂಕಿನಲ್ಲಿ 5898, ಹೂವಿನಹಡಗಲಿ ತಾಲೂಕಿನಲ್ಲಿ 2943, ಕೂಡ್ಲಿಗಿ ತಾಲೂಕಿನಲ್ಲಿ 4651 ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ 4143 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.