ಎಸ್ ಯು ಸಿ ಐ ( ಸಿ) ವತಿಯಿಂದ 6 ರಂದು ಚಲೋ ವಿಧಾನಸೌದ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,3- ಜನಜೀವನದ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯ ಮಾಡುತ್ತಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇದೇ ಮಾರ್ಚ್ 6ರಂದು ಬೃಹತ್ ಬೆಂಗಳೂರು ಚಲೋ ವಿಧಾನಸೌಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಳ್ಳಾರಿಯಿಂದ ನೂರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.. ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೋಸ್ಟರ್ಗಳನ್ನು ಎಸ್ ಯು ಸಿ ಐ ( ಸಿ) ಜಿಲ್ಲಾ ವಿಭಾಗ ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು
