
ಏ.5ಕ್ಕೆ ಡಾ.ಬಾಬು ಜಗಜೀವನ್ ರಾಂ ಜಯಂತಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 2- ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏ.5ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9 ಗಂಟೆಗೆ ಹೊಸಪೇಟೆ ನಗರದ ಶುಗರ್ ಫ್ಯಾಕ್ಟರಿ (ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ) ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ್ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಮತ್ತು 9.30ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಜಯನಗರ ಜಿಲ್ಲೆಯ ಎಲ್ಲಾ ಸಮುದಾಯದ ಸಂಘ-ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಕರ‍್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.