
ಕನಕಗಿರಿ ಉತ್ಸವ-2024
ಜಿಲ್ಲಾಧಿಕಾರಿಗಳಿಂದ ವಿವಿಧ ಸಮಿತಿ ರಚನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 07- ಜಿಲ್ಲೆಯ ಕನಕಗಿರಿ ಉತ್ಸವ-2024 ಆಚರಣೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾನಾ ಸಮಿತಿಗಳನ್ನು ರಚಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ಧಾರೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ ಅವರನ್ನು ಸಹ ಅಧ್ಯಕ್ಷರನ್ನಾಗಿ ಅಪರ ಜಿಲ್ಲಾಧಿಕಾರಿಯವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ಹಾಗೂ ಎಲ್ಲಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳನ್ನು ಸದಸ್ಯರನ್ನಾಗಿ ಸಮಿತಿ ರಚಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾರಾಜ ತಂಗಡಗಿ ನಿದೇರ್ಶನದ ಮೇರೆಗೆ ಎಸ್‌ಪಿ ಅಧ್ಯಕ್ಷತೆಯಲ್ಲಿ ಭದ್ರತಾ ಸಮಿತಿ, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ವಾಗತ, ವೇದಿಕೆ ಮತ್ತು ಆಮಂತ್ರಣ ಪತ್ರಿಕೆ ಸರಬರಾಜು ಸಮಿತಿ, ಜಿ.ಪಂ ಉಪಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ವಸತಿ ಸಮಿತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನೇತೃತ್ವದಲ್ಲಿ ಸಾರಿಗೆ ಸಮಿತಿ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿ, ಡಿಎಚ್‌ಒ ಅಧ್ಯಕ್ಷತೆಯಲ್ಲಿ ಆರೋಗ್ಯ ನೈರ್ಮಲೀಕರಣ, ಲೋಕೋಪಯೋಗಿ ಇಲಾಖೆ ಇಇ ಅಧ್ಯಕ್ಷತೆಯಲ್ಲಿ ಮೂಲಭೂತ ಸೌಕರ್ಯ ಸಮಿತಿ, ಜೆಸ್ಕಾಂ ಇಇ ಅಧ್ಯಕ್ಷತೆಯಲ್ಲಿ ವಿದ್ಯುತ್ ಸರಬರಾಜು ಸಮಿತಿಯನ್ನು ರಚಿಸಿದೆ.
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕ್ರೀಡಾ ಸಮಿತಿ, ಕೃಷಿ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮೆರವಣಿಗೆ ಸಮಿತಿ, ಜಿಲ್ಲಾ ವಾರ್ತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ, ತೋಟಗಾರಿಕೆ ಉಪನಿರ್ದೇಶಕರ ನೇತೃತ್ವದಲ್ಲಿ ವಸ್ತು ಪ್ರದರ್ಶನ ಸಮಿತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಸಮಿತಿಯನ್ನು ರಚಿಸಿ ಕೂಡಲೇ ಕಾರ್ಯಪ್ರವತರಾಗಲು ಉತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.