
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ : ಸಂತೆ-ಜಾತ್ರೆ ನಿಷೇಧ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2024ರ ನಿಮಿತ್ತ ಜಿಲ್ಲೆಯಲ್ಲಿ ಜೂನ್ 03 ರಂದು ಮತದಾನ ನಡೆಯಲಿದ್ದು, ಈ ಅವಧಿಯಲ್ಲಿ ಸಂತೆ-ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯು ಶಾಂತ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 03 ರಂದು ಜಿಲ್ಲೆಯಾದ್ಯಂತ ಮತದಾನ ಕೇಂದ್ರಗಳಿರುವ ನಗರ ಗ್ರಾಮೀಣ ಭಾಗಗಳಲ್ಲಿ ಎಲ್ಲಾ ರೀತಿಯ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.