download

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 

ನೇರ ಸಾಲ ಯೋಜನೆಗೆ ಅರ್ಜಿ ಅಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ(ಹೊಸಪೇಟೆ) –  2025-26ನೇ ಸಾಲಿನ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿAದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರೆಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ.
ವಿವಿಧ ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಮತ್ತು ಇತ್ಯಾದಿ ವ್ಯಾಪಾರಗಳಿಗೆ ಮಂಡಳಿಯಿAದ ಉದ್ಯಮದ ಘಟಕ ವೆಚ್ಚಕ್ಕೆ 1.ಲಕ್ಷರೂ ರಿಂದ 2 ಲಕ್ಷರೂಗಳನ್ನು ನೀಡಲಾಗುವುದು. ಕನಿಷ್ಟ 1 ಲಕ್ಷ ರೂಗಳಿಗೆ 20 ಸಾವಿರ ರೂ. ಸಬ್ಸಿಡಿ ಹಾಗೂ 2 ಲಕ್ಷರೂಗಳಿಗೆ 40 ಸಾವಿರ ರೂಗಳ ಸಬ್ಸಿಡಿ ನೀಡುವ ಜತೆಗೆ ಶೇ.4 ರಷ್ಟು ವಾರ್ಷಿಕ ಬಡ್ಡಿ ದರವನ್ನು ನಿಗಧಿಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಕ್ಟೋಬರ್ 31 ರಂದು ಕೊನೆಯ ದಿನವಾಗಿದೆ. ವೆಬ್‌ಸೈಟ್  https://ksbdb.karnataka.gov.in     ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿರಬೇಕು. ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಹಿಳೆಯರಿಗೆ ಶೇ.33 ರಷ್ಟು, ವಿಶೇಷ ಚೇತನರಿಗೆ ಶೇ.5 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡಿಂಗ್ ಆಗಿರಬೇಕು. ಸಹಾಯವಾಣಿ: 8762249230 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 13. ತಾಲ್ಲೂಕು ಕಚೇರಿ ಕಟ್ಟಡ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹತ್ತಿರ, ಹೊಸಪೇಟೆ. ವಿಜಯನಗರ ಜಿಲ್ಲೆ. ದೂರವಾಣಿ ಸಂಖ್ಯೆ : 08392-294230 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!