
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯರ ಪ್ರವಾಸ
ಕರುನಾಡ ಬೆಳಗು ಸುದ್ದಿ
ವಿಜಯನಗರ, 10- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಜುಲೈ 11 ಮತ್ತು ಜುಲೈ 12ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 11ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಜಯನವರ ಜಿಲ್ಲೆಯ ವಿವಿಧ ವಸತಿ ನಿಲಯಗಳು, ಜಿಲ್ಲಾಸ್ಪತ್ರೆ, ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ಹಾಗೂ ಪರಿಶೀಲನೆ ನಡೆಸುವರು.
ಜುಲೈ 12ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1.30ರವರೆಗೆ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲನಲ್ಲಿ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 1.30ಕ್ಕೆ ಪತ್ರಿಕಾಗೊಷ್ಠಿ ನಡೆಸುವರು. ಬಳಿಕ ಮಧ್ಯಾಹ್ನ 3 ಗಂಟೆಗೆ ಭಾಲ್ಕಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.