Foundation of vidhana Mandala and Balabruhi (7)

ಕರ್ನಾಟಕ ವಿಧಾನ ಮಂಡಲ ಸಂಸ್ಥೆ ಪ್ರಾರಂಭ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರುನಾಡ ಬೆಳಗು ಸುದ್ದಿ

ಬೆಂಗಳೂರು,12- ಶಾಸಕರುಗಳು, ಮಾಜಿ ಶಾಸಕರುಗಳು, ಸಂಸದರುಗಳು ಹಾಗೂ ಅವರ ಕುಟುಂಬದವರಿಗೆ ಕಾಲ ಕಳೆಯಲು ಅನೂಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಇಂದು ಬಾಲಬ್ರೂಯಿಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಉದ್ಘಾಟನೆ ಮತ್ತು ಬಾಲಬ್ರೂಯಿ ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ವಿಧಾನಸೌಧಕ್ಕೆ ಆಗಮಿಸುವ ಶಾಸಕರುಗಳಿಗೆ, ಮಹಿಳಾ ಶಾಸಕರುಗಳಿಗೆ ಕುಳಿತುಕೊಂಡು ಚರ್ಚಿಸಲು ಸ್ಥಳವಿರಲಿಲ್ಲ. ದೆಹಲಿಯಲ್ಲಿರುವ ಕಾನ್ಸುಟುಯೆನ್ಸಿ ಕ್ಲಬ್ ರೀತಿ, ವಿಧಾನ ಮಂಡಲ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಶಾಸಕರುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷಯು.ಟಿ.ಖಾದರ್ ಫರೀದ್, ಇಂಧನ ಸಚಿವ ಕೆ.ಜೆ. ಜಾರ್ಜ್, ವಿರೋಧ ಪಕ್ಷದ ನಾಯಕಆರ್. ಅಶೋಕ, ಶಾಸಕರು ಹಾಗೂ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೌಜಲಗಿ ಮಹಂತೇಶ್ ಶಿವಾನಂದ, ಶಾಸಕರು ಹಾಗೂ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಖಚಾಂಚಿ ಹಂಪನಗೌಡ ಬಾದರ್ಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಹಾಗೂ ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!