ಯಲಬುರ್ಗಾ ತಾಲ್ಲೂಕಿನ ಸಂಗನಾಳ ಮತ್ತು ಕಲ್ಲೂರು (3)

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಲಾತಂಡಗಳಿಂದ ಸರ್ಕಾರದ ಯೋಜನೆಗಳ ಪ್ರಚಾರ

ಕರುನಾಡ ಬೆಳಗು ಸುದ್ದಿ
——

ಕೊಪ್ಪಳ,15- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಬುಧವಾರದಂದು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಲಾತಂಡಗಳಿಂದ ಜಾನಪದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಮತ್ತು ಕಲ್ಲೂರು ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಶ್ರೀ ಕಾರ್ಗಿಲ್ ಮಲ್ಲಯ್ಯ ಅಂಗವಿಕಲರ ಸಾಂಸ್ಕೃತಿಕ ಸಂಘ(ರಿ) ಅಳವಂಡಿ ಕಲಾತಂಡದ ವಿರೇಶ ಅಶೋಕಪ್ಪ ಹಾಳಗುಂಡಿ ಹಾಗೂ ಸಂಗಡಿಗರಿಂದ ಬೀದಿನಾಟಕ ಪ್ರದರ್ಶನ ಕಾರ್ಯಕ್ರಮದ ಮೂಲಕ ಸರ್ಕಾರದ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಬೀದಿನಾಟಕ, ಸಂಗೀತಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮಟೆ ಬಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!