2c136fae-be38-4577-97e1-318669006cc9

ಕಲಾವಿದರ ಗುರುತಿನ ಚೀಟಿ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 16- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರ ಗುರುತಿನ ಚೀಟಿ ನೀಡುವ ಬಗ್ಗೆ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ರವರು ಸೂಚಿಸಿರುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ನೈಜ ಕಲಾವಿದರ ಪಟ್ಟಿ ತಯಾರಿಸುವುದು, ಕಲಾವಿದರ ಮಾಹಿತಿ ಸಂಗ್ರಹಿಸುವುದು, ಕಲಾವಿದರು ಎನ್ನುವುದಕ್ಕೆ ಕಲಾ ಪ್ರದರ್ಶನದ ದಾಖಲೆಗಳನ್ನು ಪಡೆದುಕೊಳ್ಳುವುದು ಸೇರಿದಂತೆ ಗುರುತಿನ ಚೀಟಿಯನ್ನು ನೀಡಲು ಅರ್ಹರಾಗಿರುವ ಕಲಾವಿದರ ಪಟ್ಟಿಯನ್ನು ತಯಾರಿಸಬೇಕಾಗಿದ್ದು, ಕೊಪ್ಪಳ ಜಿಲ್ಲೆಯ ನೈಜಕಲಾವಿದರ ಪಟ್ಟಿಯನ್ನು ತಯಾರಿಸಲು ಹಾಗೂ ಗುರುತಿನ ಚೀಟಿಯನ್ನು ನೀಡಲು ಕಲಾವಿದರು ದಾಖಲೆಗಳನ್ನು ನಿಗದಿತ ಅರ್ಜಿ ನಮೂನೆಯೊಂದಿಗೆ ದ್ವಿಪ್ರತಿಯಲ್ಲಿ ಕೋರಿರುವ ಎಲ್ಲಾ ದಾಖಲೆಗಳೊಂದಿಗೆ ಜೂನ್ 25ರ ಒಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು ಇಲಾಖಾ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!