2c136fae-be38-4577-97e1-318669006cc9

ಕಲಾವಿದರ ಮಾಸಾಶನ : ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈಗಾಗಲೇ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು ಹಾಗೂ ಮೃತ ಸಾಹಿತಿ ಅಥವಾ ಕಲಾವಿದರು ಅವಲಂಭಿತರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು ಹಾಗೂ ಮೃತ ಸಾಹಿತಿ ಅಥವಾ ಮೃತ ಕಲಾವಿದರಿಗೆ ಸಂಬಂಧಿಸಿದಂತೆ ವಿಧವಾ ಮಾಸಾಶನದಾರರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀವಿತಾವಧಿ ಪ್ರಮಾಣ ಪತ್ರದ ನಿಗದಿತ ನಮೂನೆ ಪಡೆದು ತಾವು ಮಾಸಾಶನ ಪಡೆಯುತ್ತಿರುವ ಬ್ಯಾಂಕಿನ ವ್ಯವಸ್ಥಾಪಕರಿಂದ ಧೃಡಿಕರಿಸಿ ಪ್ರಮಾಣ ಪತ್ರದ ಪ್ರತಿಯನ್ನು ಹಾಗೂ ಮಾಸಾಶನದ ಆದೇಶ ಪ್ರತಿ, ಆಧಾರ್ ಕಾರ್ಡ್, ಮಾಸಾಶನ ಪಡೆಯುತ್ತಿರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ತಮ್ಮ ಸಹಿಯೊಂದಿಗೆ ಧೃಡಿಕರಿಸಿ ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!