
ಕಲಾ ಪ್ರತಿಭೆ ಅನಾವರಣಗೊಳಿಸಿದ ‘ಚಿಗುರು’ ಸಾಂಸ್ಕೃತಿಕ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,30- ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಅವಶ್ಯಕತೆ ಇದೆ ಎಂದು ಛತ್ರಪತಿ ಶಿವಾಜಿ ವಿದ್ಯಾಮಂದಿರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಕೆ.ಕೊಟ್ರಪ್ಪ ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂಡೂರು ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರ ಫ್ರೌಢಶಾಲೆಯ ಡಾ.ಎಂ.ವೈ.ಘೋರ್ಪಡೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಚಿಗುರು’ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕøತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಬೆಳಕಿಗೆ ತರಲು ಶಿಕ್ಷಕರು ಹಾಗೂ ಪೆÇೀಷಕರು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸರಕಾರವು ಕನ್ನಡ ಸಂಸ್ಕøತಿ ಇಲಾಖೆಯ ಮೂಲಕ ಕಲೆಗೆ ಉತ್ತಮ ಪೆÇ್ರೀತ್ಸಾಹ ನೀಡುತ್ತಿದೆ, ಕಲೆಗಳು ನಾಲ್ಕುಗೋಡೆಯ ಮಧ್ಯೆ ಇರದೆ ವೇದಿಕೆಯ ಮೇಲೆ ಪ್ರದರ್ಶಿತವಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಂಡೂರು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಗದೀಶ ಬಸಾಪುರ ಸೇರಿದಂತೆ ಶಿಕ್ಷಕರು, ವಿಧ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.
ನಂತರದಲ್ಲಿ ಬಳ್ಳಾರಿಯ ನಚಿಕೇತ್ ಭಟ್ ಜೋಶಿ ಅವರಿಂದ ವಾಯಲಿನ್ ವಾದನ, ದೋಣಿಮಲೈ ಟೌನ್‍ಶಿಪ್‍ನ ಟಿ.ಸಿಂಚನರಿಂದ ಸುಗಮ ಸಂಗೀತ, ಬಳ್ಳಾರಿ ನಿಧಿ ಆಟ್ರ್ಸ್ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ದೋಣಿಮಲೈ ಡಿಟಿ ಶಿಪ್‍ನ ಎಸ್.ಕೀರ್ತನಾ ಅವರಿಂದ ಜಾನಪದ ಗೀತೆಗಳು, ಸಿರಿವಾರ ಮಲ್ಲಿಕಾರ್ಜುನ ಅವರಿಂದ ಏಕಪಾತ್ರಾಭಿನಯ (ಬಾಲಕೃಷ್ಣ ಬಯಲಾಟ), ಇಬ್ರಾಹಿಂಪುರದ ಹೆಚ್.ರಾಹುಲ್ ಸಂಗಡಿಗರಿಂದ ನಾಟಕ(ಗೌತಮಬುದ್ಧ) ಕಾರ್ಯಕ್ರಮ ಪ್ರದರ್ಶನಗೊಂಡವು.