WhatsApp Image 2024-01-31 at 7.01.11 PM

 ಬೆಂಗಳೂರಿನ ಪಾರಿಜಾತದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲಾಯಿತು

ಕರುನಾಡ ಬೆಳಗು ಸುದ್ದಿ

ಕೊಪ್ಪಳ,31- ಸಭೆಯಲ್ಲಿ ಈಗಾಗಲೇ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಂಘಟನೆ ಬಲಿಷ್ಠವಾಗಿದ್ದು ಇನ್ನುಳಿದ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ವಿಚಾರವಾಗಿ ಚರ್ಚೆ ನಡೆಸಿದರು.

ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜೊತೆಯಲ್ಲಿ ಹೊಂದಾಣಿಕೆಗೆ ಮುಂದಾಗಿದ್ದಲ್ಲಿ ಮುಕ್ತವಾಗಿ ಪಕ್ಷದ ಕಾರ್ಯಕರ್ತರೆಲ್ಲರೂ ಕೂಡ ಬದ್ಧವಾಗಿರಬೇಕು ಎಂಬ ವಿಚಾರಗಳನ್ನು ಚರ್ಚಿಸಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿಯವರು ತೆಗೆದುಕೊಳ್ಳುವ ನಿರ್ಣಯಗಳಿಗೆ ಬದ್ಧರಾಗಿದ್ದೇವೆ ಎಂದು ಸಭೆಯಲ್ಲಿ ಒಕ್ಕೂರಲಿನಿಂದ ಪಕ್ಷದ ಎಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ತೀರ್ಮಾನಿಸಿದರು.

ಈ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರುಗಳಾದ ಮನೋಹರ ಗೌಡ ಹೇರೂರ್, ಮುನ್ನಾಭಾಯಿ,ದೀವಾಕರ್, ವೆಂಕಟರಮಣ,ಶ್ರೀಕಾಂತ ಬಂಡಿ,ರಾಜ್ಯ ಯುವ ಘಟಕದ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಮಹಿಳಾ ಘಟಕದ ರಾಜ್ಯ ಅಧ್ಯಕ್ಷಿಣಿ ಶ್ರೀಮತಿ ಹೇಮಲತಾ,ಬಳ್ಳಾರಿ ಜಿಲ್ಲಾಧ್ಯಕ್ಷರಾದ ಧಮ್ಮೂರ ಶೇಖರ,ಕೊಪ್ಪಳ ಜಿಲ್ಲಾಧ್ಯಕ್ಷರಾದ ಸಂಗಮೇಶ ಬಾದವಾಡಗಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!