WhatsApp Image 2024-07-14 at 5.27.21 PM

ಕಳಪೆ ಕಾಮಗಾರಿ ಅಧಿಕಾರಿಗಳ ಮೇಲೆ ಕ್ರಮ : ಬಸವರಾಜ್ ರಾಯರೆಡ್ಡಿ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 14- ತಾಲೂಕಿನ ಲೋಕೋಪವಾಗಿ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಲ್ಲಿ ಕಳಪೆ ಕಾಮಗಾರಿ ಮಾಡಿರೋದು ಕಂಡು ಬಂದರೆ ಯಾವುದೇ ಮುಲಾಜಿ ಇಲ್ಲದೆ ಸರ್ಕಾರಕ್ಕೆ ಕ್ರಮ ಜರುಗಿಸುವುದಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಶಾಸಕ ಬಸವರಾಜ ರಾಯರೆಡ್ಡಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ತಾಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆ ಇದೆ ನಾನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಎಲ್ಲಾ ವಿಭಾಗದ ವೈದ್ಯರನ್ನು ನೇಮಕ ಮಾಡುವುದಕ್ಕೆ ಮುಂದಾಗುತ್ತೇನೆ ತಾಲೂಕಿನ ಬಳಗೇರಿ. ಚಿಕ್ಕ ಮ್ಯಾಗೇರಿ. ಬಂಡಿ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಆಗಿದ್ದು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಲು ನಾನು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಆರೋಗ್ಯ ಇಲಾಖೆ ಸೇರಿಕೊಂಡು ತಾತ್ಕಾಲಿ ಬಿಲ್ಡಿಂಗ್ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ರಾಜ್ಯಾದ್ಯಂತ ಡೆಂಗ್ಯೂ‌ ಜ್ವರದ ಹಾವಳಿ ಹೆಚ್ಚಾಗಿದ್ದು ತಾಲೂಕಿನಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಅಗತ್ಯ ಕ್ರಮ‌ವಹಿಸಬೇಕು. ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಡೆಂಗ್ಯೂ ಪರೀಕ್ಷಾ‌ ಕಿಟ್ ಗಳನ್ನು ವಿತರಿಸಬೇಕು. ಅಲ್ಲದೇ ಡೆಂಗ್ಯೂ ಜ್ವರದಿಂದ ಬಳಲುವ ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆ ಒದಗಿಸುವದರ ಜೊತೆಗೆ ಡೆಂಗ್ಯೂ ಜ್ವರಕ್ಕೆ ಬೇಕಾಗುವಂತಹ ಅಗತ್ಯದ ಔಷಧಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು.
ಡೆಂಗ್ಯೂ‌ ಜ್ವರದ ಲಕ್ಷಣಗಳು‌, ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಮುಂದಾಗುವಂತೆ ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ‌ ಮುಂಗಾರು‌ ಮಳೆ ಉತ್ತಮವಾಗಿ ಆಗುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ರೈತರಿಗೆ ಬಿತ್ತನೆ ಬೀಜ‌ ಹಾಗೂ ರಸಗೊಬ್ಬರದ ಕೊರತೆ ಆಗದಂತೆ‌ ನಿಗಾವಹಿಸಬೇಕು. ಕಳೆದ ವರ್ಷ ಕೃಷಿ ಇಲಾಖೆಯಿಂದ ರೈತರಿಗೆ ನೀಡಿದ ಟ್ರ್ಯಾಕ್ಟರ್ ರೈತರಿಗೆ ಸದ್ಬಳಕೆ ಆಗುತ್ತದೆ ಇಲ್ಲ ಎಂದು ನೋಡಿ ಈ ವರ್ಷ ಹೆಚ್ಚಿನ ಟ್ಯಾಕ್ಟರ್ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡುತ್ತೇನೆ ಯಾವ ರೈತರು ನನ್ನ ಹತ್ತಿರ ಬರದ ಹಾಗೆ ನೋಡಿಕೊಳ್ಳಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನಲ್ಲಿ ಕೈಗೊಳ್ಳಲಾದ‌ ಜಲ ಜೀವನ‌ ಮಿಷನ ಯೋಜನೆಯಡಿ ಕೈಗೊಂಡ ಕಾಮಗಾರಿ ದೊಡ್ಡ ಪ್ರಮಾಣದಲ್ಲಿ ಕಳೆಪೆ ಕಾಮಗಾರಿ ಆಗಿದೆ ನಾಲ್ಕು ವಿಭಾಗದ ಗುತ್ತಿಗೆದಾರರು ಕೆಲಸ ಮಾಡಿದ್ದರಿಂದ ತೀರಾ ಹಳ್ಳ ಹಿಡಿದು ಹೋಗಿದೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಅಪೂರ್ಣ ಕಾಮಗಾರಿ ಹಾಗೂ‌ ಸಮರ್ಪಕ‌ ನೀರು ಪೂರೈಕೆ ಆಗುತ್ತಿರುವ ಕುರಿತು ಪರಿಶೀಲಿಸಲು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತುಂಗಭದ್ರ ನದಿಯಿಂದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ನಾಲ್ಕು ವರ್ಷಗಳಿಂದ ನಿಧಾನವಾಗಿ ಕಾಮಗಾರಿ ಆಗುತ್ತಿದೆ ಶೀಘ್ರವೇ ಪೂರ್ಣಗೊಳಿಸಬೇಕು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಕರ್ನಾಟಕ ಪಂಚಾಯತ್ ರಾಜ್ಯ ಅಧಿನಿಯಮದ ಪ್ರಕಾರ ಶಿಸ್ತು ಕ್ರಮ ಜರುಗಿಸುವುದಕ್ಕೆ ಮುಂದಾಗುತ್ತೇನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುವದರ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕೆಲಸ ಮಾಡಿ ಗ್ರಾಮವನ್ನು ಸ್ವಚ್ಛತೆ ಇಟ್ಟುಕೊಳ್ಳಬೇಕು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಬುರ್ಗಾ ತಾಲೂಕಿನ ಲೋಕೋಪಕ್ಕೆ ಇಲಾಖೆಗೆ ಗುಂಡಿ ಮುಚ್ಚುವುದಕ್ಕೆ ಅನುದಾನ ಬಂದಿದ್ದು. ಕ್ಷೇತ್ರದ ರಸ್ತೆ ಗಳಿಗೆ ಗುಂಡಿ ಮುಚ್ಚುವ ಕೆಲಸಕ್ಕೆ ಲೋಕೋಪೋಕಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಕರ್ನಾಟಕ ಭೂಸೇನೆ ಇಲಾಖೆಗೆ ನೀಡಿದ ಕಾಮಗಾರಿ ಸಂಪೂರ್ಣ ಕಳಪೆ ಆಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಶಂಕರ್ ಶಾಸಕರ ಗಮನಕ್ಕೆ ತಂದರು ಕ್ಷೇತ್ರದಲ್ಲಿ ಭೂಸೇನಾ ನಿಗಮದಿಂದ ಕೈಗೊಂಡ ಕಾಮಗಾರಿ ಕಳೆಪೆ ಆದರೆ ನಿಮ್ಮನ್ನು ನಾನು ಮನೆಗೆ ಕಳುಹಿಸುತ್ತೇನೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಭೂ ಸೇನಾ ನಿಗಮದ ಅಧಿಕಾರಿಗಳಿಗೆ ಶಾಸಕರು ತರಾಟೆಗೆ ತೆಗೆದುಕೊಂಡರು.

ಅಬಕಾರಿ ಇಲಾಖೆ ಸರ್ಕಾರಕ್ಕೆ ಹೆಚ್ಚು ತೆರಿಗೆ ನೀಡುವ ದೊಡ್ಡ ಇಲಾಖೆ ಆಗಿದ್ದು. ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಸಹಕಾರದಿಂದ. ವಿವಿಧ ಹೆಸರಿನ ಮಧ್ಯದ ಅಂಗಡಿಗಳಿಗೆ ಅಕ್ರಮ ಸರಾಯಿ ಪೂರೈಕೆ ಆಗುತ್ತದೆ. ಎಂದು ಶಾಸಕರೇ ನೇರವಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ಹೇಳಿದರು.

ತಾಲೂಕಿನಲ್ಲಿ ಅರಣ್ಯ ಇಲಾಖೆ 33 ಕಿಲೋಮಿಟರ್ ಅರಣ್ಯೀಕರಣ ಮಾಡಲಾಗಿದೆ ಎಂದು ಶಾಸಕರಿಗೆ ಹೇಳಿದರು ಎಲ್ಲಿ ಗಿಡ ಹಚ್ಚಿದ್ದೀರಿ ಅದರ ದಾಖಲಾತಿ ತನ್ನಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ತಾಲೂಕಿನಲ್ಲಿ ಇಲಾಖೆ ಅಧಿಕಾರಿಗಳು ರೈತರಿಗೆ ಸಾರ್ವಜನಿಕರಿಗೆ ಯಾವುದೇ ಕೆಲಸವನ್ನು ಸರ್ಕಾರದ ನಿಯಮದ ಪ್ರಕಾರ ಮಾಡಿಕೊಡಬೇಕು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾಡುವ ಕೆಲಸಕ್ಕೆ ಜನರನ್ನು ನಮ್ಮ ಹತ್ತಿರ ಕಳಿಸಬೇಡಿ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾಳಜಿ ಇಟ್ಟುಕೊಂಡು ಕೆಲಸ ಮಾಡಬೇಕು ಬಹಳ ಸಮಸ್ಯೆ ಇರೋದು ಗ್ರಾಮ ಪಂಚಾಯಿತಿ ಅಧಿಕಾರಿಗಳ ಬಗ್ಗೆ ಇದೆ ಯಾವುದೇ ಆರೋಪ ಬರದ ಹಾಗೆ ಕೆಲಸ ಮಾಡುವುದಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು

ಯಲಬುರ್ಗಾ ತಾಲೂಕಿನಲ್ಲಿ ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳುವುದಕ್ಕೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ತಾಲೂಕ ಪಂಚಾಯತಿ ನಾಮ ನಿರ್ದೇಶನ ಸದಸ್ಯ ನಾಗರಾಜ್ ಉಚ್ಚಲ ಕುಂಟ. ಸಭೆಯಲ್ಲಿ ಶಾಸಕರಿಗೆ ಹೇಳಿದರು ಕೃಷಿ ಇಲಾಖೆ ಅಧಿಕಾರಿ ಮಾತನಾಡಿ ಸರ್ಕಾರ ಗುರಿ ಮುಗಿದು ಹೋಗಿದೆ ಸರ್ಕಾರ ಅನುದಾನ ಕಡಿಮೆ ಕೊಟ್ಟಿದ್ದರಿಂದ ರೈತರಿಗೆ ಸರಿಯಾಗಿ ವಿತರಣೆ ಆಗಿಲ್ಲ ಎಂದರು.

ಕ್ಷೇತ್ರದ ಶಾಸಕರು ಮಾತನಾಡಿ ಈ ವರ್ಷ ಸರ್ಕಾರ ನಿಗದಿ ಗಿಂತ ನಾಲ್ಕು ಪಟ್ಟು ಕೃಷಿ ಇಲಾಖೆಗೆ ಕೊಡಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ್ , ಯಲಬುರ್ಗಾ ತಹಶೀಲ್ದಾರ್ ಬಸವರಾಜ್ ತೆನ್ನಳ್ಳಿ. ಕುಕುನೂರು ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತಿಯ ನಾಮ ನಿರ್ದೇಶನ ಸದಸ್ಯರು. ಇಲಾಖೆಯ ಅಧಿಕಾರಿಗಳು ವರದಿಯನ್ನು ಶಾಸಕರಿಗೆ ಮಂಡಿಸಿದರು.

Leave a Reply

Your email address will not be published. Required fields are marked *

error: Content is protected !!