ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ; ಅಚ್ಚರಿ ಆಯ್ಕೆ
ಜಿಲ್ಲಾಧ್ಯಕ್ಷರಾಗಿ ಮಲ್ಲಿಕಾರ್ಜುನ ನಾಗಪ್ಪ ನೇಮಕ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,09- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡಲಾಗಿದೆ.
ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಆದೇಶ ಹೊರಡಿಸಿದ್ದು ,ಈ ಹಿಂದೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿರುವುದು ಅಚ್ಚರಿ ಮೂಡಿಸಿದೆ.
ಎಂ.ಮಲ್ಲಿಕಾರ್ಜುನ ನಾಗಪ್ಪ ಅವರ ನೇಮಕವೂ ಕೂಡ ಜಿಲ್ಲೆಯಲ್ಲಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಜಿಲ್ಲೆಯ ಹಳೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆ; ಎಂ.ಮಲ್ಲಿಕಾರ್ಜುನ ನಾಗಪ್ಪ 2008ಕ್ಕೂ ಮೊದಲು ಕನಕಗಿರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಇನ್ನು 1999 ರಿಂದ 2004ರ ವರೆಗೆ ಎಸ್.ಎಂ.ಕೃಷ್ಣ ಸರಕಾರದಲ್ಲಿ ರಾಜ್ಯ ಖಾತೆ ಮಂತ್ರಿ ಆಗಿಯೂ ಕೆಲಸ ಮಾಡಿದ್ದರು.
