
ಕಾಂಗ್ರೆಸ್ ಅಭ್ಯರ್ಥಿ ಪರ ಎಚ್.ಆರ್.ಶ್ರೀನಾಥ್, ಅಮರೇಶ್ ಕರಡಿ ಪ್ರಚಾರ
ಕರುನಾಡ ಬೆಳಗು ಸುದ್ದಿ
ಗಂಗಾವತಿ, 21- ಲೋಕಸಭೆ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರ ಪರವಾಗಿ ವಣಬಳ್ಳಾರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಹಾಗೂ ಕಾಂಗ್ರೆಸ್ ಮುಖಂಡ ಅಮರೇಶ್ ಕರಡಿ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮತದಾರರಿಗೆ ಗ್ಯಾರಂಟಿ ಕಾಡ್೯ ಗಳನ್ನು ವಿತರಣೆ ಮಾಡಿ ಕಾಂಗ್ರೆಸ್ ಗೆ ಮತ ಹಾಕಿ ಮತ್ತು ಹಾಕಿಸುವಂತೆ ಭರ್ಜರಿಯಾಗಿ ಪ್ರಚಾರ ನಡೆಸಲಾಯಿತು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್, ಕೊಪ್ಪಳ ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ನ ಭದ್ರಕೋಟೆ. ಕಾಂಗ್ರೆಸ್ ನಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ನಡೆದಿವೆ. ಈ ಬಾರಿ ಕಾಂಗ್ರೆಸ್ ಗೆ ಮತ ನೀಡಿ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಅವರನ್ನು ಬಹುಮತ ದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಅಮರೇಶ್ ಕರಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಕೊಟ್ಟ ಮಾತಿನಂತೆ ಎಲ್ಲ ಗ್ಯಾರೆಂಟಿ ಯೋಜನೆ ಅನುಷ್ಠಾನಗೊಳಿಸಿದೆ. ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ. ಅದರಂತೆ ನಮ್ಮ ಪ್ರಣಾಳಿಕೆಯಲ್ಲಿ ಹಲವು ಗ್ಯಾರೆಂಟಿ ಯೋಜನೆ ಬಗ್ಗೆ ಭರವಸೆ ನೀಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ಯೋಜನೆ ಅನುಷ್ಠಾನಗೊಳ್ಳಲಿವೆ. ಕಾಂಗ್ರೆಸ್ ಗೆ ಮತ ಹಾಕಿ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮಿದ್ ಮನಿಯಾರ್, ಗಂಗಾವತಿ ಕ್ಷೇತ್ರದ ಯುವ ನಾಯಕ ಹನುಮಂತಪ್ಪ ಹೆಚ್ ಅರಸನಕೇರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಸನ್ನ ಗಡಾದ್ ಹಾಗೂ ರಾಮಣ್ಣ ಚೌಡ್ಕಿ, ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು, ಎಪಿಎಂಸಿ ಸದಸ್ಯರು, ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ ಪ್ರಮುಖ ಉಪಸ್ಥಿತರಿದ್ದರು.