9069015f-b0ac-4433-b962-458063e210e1

ಕಾಂಗ್ರೆಸ್‌ ಒಳಸುಳಿ ಹರಿಪ್ರಸಾದ್ ಬಲ್ಲರು:

ಮಾಜಿ ಸಚಿವ ಸಿ.ಟಿ. ರವಿ

ಕರುನಾಡ ಬೆಳಗು ಸುದ್ದಿ
ಕೊಪ್ಪಳ, 05-   ರಾಮಮಂದಿರ ಉದ್ಘಾಟನೆ ವೇಳೆ‌ ಮತ್ತೊಂದು ಗೋಧ್ರಾ ರೀತಿಯಲ್ಲಿ ಹತ್ಯಾಕಾಂಡ ಘಟನೆ ನಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿ ಪ್ರಸಾದ್ ಹೇಳಿದ್ದನ್ನು ನೋಡಿದರೆ ಹರಿ ಪ್ರಸಾದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂ0 ಎಲ್ಲ ಒಳಸುಳಿ ಬಲ್ಲವರಾಗಿದ್ದಾರೆ ಎನ್ನುವುದು ಖಾತ್ರಿಯಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.

ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದವರ ಮೇಲಿದ್ದ ಪ್ರಕರಣಗಳನ್ನು ಸಿಎಂ ವಾಪಸ್ ಪಡೆದಿದ್ದಾರೆ ಎಂದು ಆರೋಪಿಸಿದರು.ಸಿಎಂ ಹಿಂಬಾಲಕರು ಈ ರೀತಿಯ ಕೃತ್ಯ ಮಾಡುವ ಸೂಚನೆ ಇರಬೇಕು. ಅದಕ್ಕೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಬಹುದು. ಅವರನ್ನು ತನಿಖೆಗೆ ಒಳಪಡಿಸಬೇಕುರಾಮ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ರಾಮಮಂದಿರ ಉದ್ಘಾಟನೆ ‌ಅಂಗವಾಗಿ ಹಿಂದೂ ಕಾರ್ಯಕರ್ತರು ಮನೆಮನೆಗೆ ತೆರಳಿ ಮಂತ್ರಾಕ್ಷತೆ ನೀಡುತ್ತಿದ್ದಾರೆ. ಇದಕ್ಕೆ ಅನ್ನಭಾಗ್ಯದ ಅಕ್ಕಿ ಬಳಕೆ ಮಾಡಲಾಗುತ್ತಿದೆ ಎಂದು‌ ಕೆಲ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅನ್ನ ಬೆಳೆದ ರೈತ ಎಲ್ಲಿಯೂ ತನ್ನ ಅಕ್ಕಿ ಎಂದು ಹೇಳಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆ.ಜಿ. ಅಕ್ಕಿ ಮೇಲೆ ರಾಜ್ಯ ಸರ್ಕಾರ ಒಂದು ಕೆ.ಜಿ. ಅಕ್ಕಿ ಕೊಟ್ಟಿಲ್ಲ. ನನ್ನದು ‌ಎನ್ನುವುದು ದೊಡ್ಡ ಅಹಂಕಾರ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!