
ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೋರೆದು ಬಿಜೆಪಿಗೆ ಸೇರ್ಪಡೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,29- ಭಾರತೀಯ ಜನತಾ ಪಾರ್ಟಿ ಕಾರ್ಯಾಲಯ ಬಳ್ಳಾರಿಯಲ್ಲಿ ಸಂಡೂರಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಅವರ ಮತ್ತು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ ಎಸ್ ಸೋಮಲಿಂಗಪ್ಪ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು.
ಸಂಡೂರು ತಾಲೂಕಿನ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಟಿ ಅಡಿವಪ್ಪ ಮಟ್ಟಿಗ್ರಾಮ, ಅಂಜಿನಪ್ಪ ಗಾಣತಿಗಟಿ, ಟಿ.ಚಂದ್ರಪ್ಪ ಸ್ವಾಮಿ ಹಳ್ಳಿ, ಮರಿಬಸಪ್ಪ ಮತ್ತು ಹಲವು ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಗಾಳಿ ಶಂಕರಪ್ಪ ಮತ್ತು ಉಳುರು ಸಿದ್ದೇಶ ಮತ್ತು ರಾಜು ತೊಗರಿ ಅವರು ಇದ್ದರು.