IMG-20240427-WA0005

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 27- ಕಾಂಗ್ರೆಸ್‌ ನ ದುರಾಡಳಿತವನ್ನು ವಿರೋಧಿಸಿ, ಬಿಜೆಪಿಯ ತತ್ವ ಹಾಗೂ ಸಿದ್ದಾಂತವನ್ನು ಮೆಚ್ಚಿ ಗೊಂಡಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೀರೆಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.

ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಸತತ ಮೂರು ಬಾರಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಬರುತ್ತಿದ್ದು, ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ‌.ಶರಣಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಹಾಲಪ್ಪ ಆಚಾರ್, ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಪ್ರದೀಪ್ ಹಿಟ್ಣಾಳ್ ಸೇರಿ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!