
ಬಿಜೆಪಿ ನಡೆದುಕೊಳ್ಳುತ್ತಿರುವ ರೀತಿ ಮತ್ತು ಅಸ್ಸಾಂ ಸರ್ಕಾರ ಮಾಡಿರುವಂತಹ ಅವಮಾನವನ್ನ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,23- ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ಸಿನ ಹಿರಿಯ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವಂತಹ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ರೀತಿ ಮತ್ತು ಅಸ್ಸಾಂ ಸರ್ಕಾರ ಮಾಡಿರುವಂತಹ ಅವಮಾನವನ್ನ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರವಾಸಿ ಮಂದಿರದಿಂದ ಹೊರಟು ಅಶೋಕ ವೃತ್ತದ ವರೆಗೆ ಮೆರವಣಿಗೆ ಮೂಲಕ ತೆರಳಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಅಧ್ಯಕ್ಷ ಕೆ. ರಾಜಶೇಖರ್ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ಜ್ಯೋತಿ ಎಂ. ಗೊಂಡಬಾಳ, ನಗರ ಬ್ಲಾಕ್ ಅಧ್ಯಕ್ಷ ಕಾಟನ್ ಪಾಷಾ, ನಗರ ಸಭೆ ಸದಸ್ಯರುಗಳಾದ ಅಕ್ಬರ್ ಪಾಶಾ, ಅಜೀಮ್ ಅತ್ತಾರ, ಮುಖಂಡರುಗಳಾದ ಸಲೀಂ ಅಳವಂಡಿ, ಮಂಜುನಾಥ ಜಿ. ಗೊಂಡಬಾಳ, ಗವಿಸಿದ್ದನಗೌಡ ಪಾಟೀಲ, ನಿಂಗರಾಜ ಕಾಳೆ, ಪರಶುರಾಮ ಕೆರೆಹಳ್ಳಿ ಇತರರು ಇದ್ದರು.