ಕಾಂಗ್ರೆಸ್ ತೆಕ್ಕೆಗೆ ಜಾರಿದ ಪಪಂ ಮಾಜಿ ಸದಸ್ಯ – ಅಮರೇಗೌಡ ಬಯ್ಯಾಪುರ ನೇತೃತ್ವದಲ್ಲಿ ಸೇರ್ಪಡೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 15- ಇಲ್ಲಿನ ಭಾಗ್ಯನಗರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ವಿಜಯ್ ಕುಮಾರ್ ಪಾಟೀಲ್ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮ ಮೆಚ್ಚಿ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಬಿಜೆಪಿ ತೊರೆದು ಸೋಮವಾರ ಕಾಂಗ್ರೆಸ್ ಸೇರ್ಪಡೆಗೊಂಡರು.
ಪಟ್ಟಣ ಪಂಚಾಯತಿ ಮಾಜಿ ಸದಸ್ಯ ವಿಜಯಕುಮಾರ್ ಪಾಟೀಲ್ ಸಂಸದ ಸಂಗಣ್ಣ ಕರಡಿಯವರ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದ ಅವರು ಬಿಜೆಪಿಯಲ್ಲಿ ಕಡೆಗಣಿಸಿದ್ದರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ವೇದಿಕೆ ಪರಿಶೀಲನೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮಂಗಳವಾರ ನಾಮಪತ್ರ ಸಲ್ಲಿಕೆಯ ನಂತರ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಜೊತೆಗೂಡಿ ವೀಕ್ಷಿಸಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜಶೇಖರಗೌಡ ಆಡೂರ್,ಪ್ರಸನ್ನ ಗಡಾದ, ಕೃಷ್ಣ ಇಟ್ಟಂಗಿ, ಬಸವರಾಜ್ ಭೋವಿ ,ಅಮ್ಜದ್ ಪಟೇಲ್ , ಶಿವಕುಮಾರ್ ಪಾವಲಿ ಶೆಟ್ಟರ್, ವಿಜಯಕುಮಾರ್ ಕವಲೂರ, ಮಂಜುನಾಥ ಗೊಂಡಬಾಳ, ಅರುಣ್ ಶೆಟ್ಟಿ ಸೇರಿದಂತೆ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

