IMG_20240223_120430

ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯಿಂದ ಸಮುದಾಯಕ್ಕೆ ಅನ್ಯಾಯ
ಮೀಸಲಿಟ್ಟ ಅನುದಾನ ಬೇರೆ ಯೋಜನೆಗೆ ಬಳಕೆ ಕೊಪ್ಪಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,23- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯಿಂದ ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕೆಲಸಕ್ಕೆ ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಭಾರತೀಯ ಜನತಾ ಪಾರ್ಟಿ ಕೊಪ್ಪಳದಲ್ಲಿ ಪ್ರತಿಭಟನೆಯನ್ನು ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸರ್ಕಾರ ಅನುದಾನವನ್ನು ತಮ್ ಸ್ವಾರ್ಥಸಾಧನೆಗಾಗಿ ಬೇರೆ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಮೋಸ ಮಾಡುತ್ತಿದೆ ಎಂದು ದೂರಿ ತಹಸೀಲ್ದಾರ ಗವಿಸಿದ್ದಪ್ಪ ಅವರಿಗೆ ಪ್ರತಿಭಟನಾಕಾರರು ಸರ್ಕಾರದ ಧೋರಣೆ ಖಂಡಿಸಿ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ ಮಾತನಾಡಿ, ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ ಸಲುವಾಗಿ ದಲಿತ ಸಮುದಾಯಕ್ಕೆ ಮೀಸಲಿಟ್ಟದ್ದ 11.44 ಕೋಟಿ ರೂ. ಗಳ ಎಸ್ ಸಿ ಮತ್ತು ಟಿಎಸ್ಪಿ್ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಗೀತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡಿದ್ದಾರೆ ಎಂದರು.

ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ, ದಲಿತ ವಿದ್ಯಾರ್ಥಿಗಳಿಗ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣ್ಣವು ಕೂಡ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷೀಸುತ್ತಿದಾರೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಭಾಗ ಸಹ ಪ್ರಭಾರಿ ಚಂದ್ರಶೇಖರ್ ಹಲಗೇರಿ, ಮುಖಂಡರಾದ ಈಶಪ್ಪ ಹಿರೇಮನಿ, ಮಂಜುಳಾ ಕರಡಿ, ಜಿಲ್ಲಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ, ಸುನಿಲ ಹೆಸರೂರ, ಶಿವು ಅರಕೇರಿ, ಖಜಾಂಚಿ ನರಸಿಂಗ ರಾವ್ ಕುಲಕರಣಿ, ಪ್ರಮುಖರಾದ ಕನಕಮೂರ್ತಿ ಛಲವಾದಿ, ಗಣೇಶ ಹೊರತಟ್ನಾಳ, ಲಕ್ಷ್ಮಣ ಕಾಳಿ, ಮಹಾಲಕ್ಷ್ಮಿ ಕಂದಾರಿ, ಕೀರ್ತಿ ಪಾಟೀಲ, ಪ್ರದೀಪ ಹಿಟ್ನಾಳ, ವಿರೇಶ ಸಜ್ಜನ, ಮಹಾತೇಶ ಪಾಟೀಲ್, ಮಂಜುನಾಥ್ ಪಾಟೀಲ್, ಮಂಜುನಾಥ ಮುಸಲಾಪುರ, ಗೀತಾ ಪಾಟೀಲ, ಫಕೀರಸ್ವಾಮಿ ಕರ್ಕಿಹಳ್ಳಿ, ಕೋಟ್ರಪ್ಪ ತೋಟದ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಎಸ್ ಸಿ ಮೋರ್ಚಾದ ಪದಾಧಿಕಾರಿಗಳು ಪ್ರಮುಖರು ಇದ್ದರು.

Leave a Reply

Your email address will not be published. Required fields are marked *

error: Content is protected !!