
ಬಳ್ಳಾರಿ : ಕುಂದು ಕೊರತೆಗಳ ಅಹವಾಲು ಸ್ವೀಕಾರ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,6-ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಜಿಲ್ಲೆಯ ಸಿರುಗುಪ್ಪ, ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆಯನ್ನು ಫೆ.13 ರಿಂದ ಆಯೋಜಿಸಲಾಗಿದೆ ಎಂದು ಬಳ್ಳಾರಿ ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ಪ್ರಾರಂಭಿಸಿದ್ದಾರೆ.
ಫೆ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ, ಫೆ.14 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಬಳ್ಳಾರಿ ತಾಲ್ಲೂಕು ಕಚೇರಿ ಸಭಾಂಗಣ ಮತ್ತು ಫೆ.15 ರಂದು ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ.
ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು.
ಕುಂದುಕೊರತೆಗಳ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲು. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ರಂದು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.