2c136fae-be38-4577-97e1-318669006cc9

ಕುಕನೂರು ಪ.ಪಂ : ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 25- ಕೇಂದ್ರ ಪುರಸ್ಕೃತ ದೀನದಯಾಳ್ ಅಂತ್ಯೋದಯ ಯೋಜನೆ (ಡೇ-ನಲ್ಮ್) ಯ ಸನ್ 2024-25ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಕುಕನೂರು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವ್ಯಕ್ತಿಗತ ಉದ್ಯೋಗ ಹಾಗೂ ಗುಂಪು ಉದ್ದಿಮೆ ಸ್ಥಾಪಿಸಲು ಬಡ್ಡಿ ಸಹಾಯಧನದಡಿ ಸಾಲ ಸೌಲಭ್ಯ ಪಡೆಯಲಿಚ್ಛಿಸುವವರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ, 12 ಸ್ವಸಹಾಯ ಗುಂಪು ರಚನೆ ಗುರಿ, ಸ್ವ ಸಹಾಯ ಗುಂಪುಗಳಿಗೆ (ಡೇ-ನಲ್ಮ್) ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ (ಕ್ರೆಡಿಟ್ ಲಿಂಕೇಜ್)ವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದ್ದು, 18 ರಿಂದ 45 ವರ್ಷದವರೆಗಿನ ಅರ್ಹ ಫಲಾನುಭವಿಗಳು ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬಿ.ಪಿ.ಎಲ್. ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಝೆರಾಕ್ಸ ಪ್ರತಿ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳನ್ನು ದ್ವಿಪ್ರತಿಯಲ್ಲಿ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!