a831812b-7f76-4737-9e6e-c4d7453cec44 (1)

ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ

ಗುರುಬಸವ ಮಠದ ಬಸವಭೂಷಣಸ್ವಾಮಿ

ಕರುಣಾಡ ಬೆಳಗು ಸುದ್ದಿ

ಸಿರುಗುಪ್ಪ, 04-  ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ, ಮಹಿಳೆಯರೇ ಯಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವೆ ಎಂದು ಗುರುಬಸವ ಮಠದ ಬಸವಭೂಷಣಸ್ವಾಮಿ ಹೇಳಿದರು.

ಸಿರುಗುಪ್ಪ ಪಟ್ಟಣದಲ್ಲಿರುವ ನೀಲಕಂಠ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮವನ್ನು, ಮಹಿಳಾ ಸಮಾವೇಶ ಮತ್ತು ಪ್ರತಿಭಾ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯಡಿ ಹೆಚ್ಚಿನ ದಾಖಲೆಗಳ ಜಂಜಾಟವಿಲ್ಲ, ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಸಾಲ ಪಡೆಯಬಹುದಾಗಿದೆ, ಹೀಗಾಗಿ ಸಣ್ಣ ಪುಟ್ಟ ವ್ಯಾಪಾರ ಮಾಡುವವರಿಗೆ ಎಷ್ಟು ಅನುಕೂಲವಿದೆ ಎಂದರು. ಇಂದು ನೂರಾರು ಕುಟುಂಬಗಳ ಮಹಿಳೆಯರು ಸಾಲಾ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಹೇಳಿದರು.

ಈ ಯೋಜನೆ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಬಿ ಸಿ ಟ್ರಸ್ಟ್ ನ ಯೋಜನಾಧಿಕಾರಿ, ಸುಧೀರ್, ಮತ್ತು ಟ್ರಸ್ಟ್ ನಿರ್ದೇಶಕ ರೋಹಿತಾಕ್ಷ, ಪ್ರಾದೇಶಿಕ ನಿರ್ದೇಶಕ ಬಿ ಗಣೇಶ್ ಮತ್ತು ಮುಖಂಡರಾದ ಎನ್ ಜೆ ಬಸವರಾಜಪ್ಪ, ಕೋಟಿ ರೆಡ್ಡಿ, ನಾಗರಾಜು ಹಾಗೂ ಹಲವಾರು ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!