
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಿ : ಶಂಶೇ ಆಲಂ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,29- ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಹಶೀಲ್ದಾರ್ ಶಂಶೇ ಆಲಂ ತೀಳಿಸಿದರು.
ಸಿರುಗುಪ್ಪ ನಗರ ತೆಕ್ಕಲಕೋಟೆ ಪಟ್ಟಣ ಪಂಚಾಯತ್ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರು ಸರಬರಾಜು ಇಲಾಖೆ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರಂತರ ಸಕಾಲಕ್ಕೆ ಮಾಹಿತಿ ಪಡೆಯಲಾಗಿದೆ ಮುಂಜಾಗ್ರತ ಕ್ರಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರು ಸಿಗದೇ ಇದ್ದಲ್ಲಿ ಬೋರ್ವೆಲ್ ಪಡೆಯಲು ಟೆಂಡರ್ ಕರೆಯಲಾಗಿದೆ ಸರ್ಕಾರದಿಂದ ಕೊರೆದಿರುವ ಬೋರ್ ವೆಲ್ ಗಳ ರಿಚಾರ್ಜ್ಗೆ ಕ್ರಮ ಕೈಗೊಳ್ಳಲಾಗಿದೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮ ಕೈಗೊಂಡಿದೆ ಎಂದು ಶಂಶೇ ಆಲಂ ಅವರು ತಿಳಿಸಿದರು.