67ad271c-940e-4a9a-8c40-c6483b64aa9a

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ

ಶಾಸಕ ಬಿ ಎಂ ನಾಗರಾಜ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, ೨೭- ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬಿ ಎಂ ನಾಗರಾಜ್ ಅವರು ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಭವನದಲ್ಲಿ ಬೇಸಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಟಾಸ್ಕ್ ಫೋರ್ಸ್ ಸಭೆಯನ್ನು ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ತಹಶಿಲ್ದಾರ್ ಹೆಚ್ ವಿಶ್ವನಾಥ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ .

ನಗರಸಭಾ ಆಯುಕ್ತರಾದ ಗಂಗಾಧರ ಗೌಡ ಪಶು ವೈದ್ಯಾಧಿಕಾರಿ ಸಹಾಯಕ ನಿರ್ದೇಶಕ ಡಾ ಗಂಗಾಧರ ಅವರನ್ನು ಸಿರುಗುಪ್ಪ ತಾಲೂಕಿನಲ್ಲಿ ಬೇಸಿಗೆ ಕಾಲಕ್ಕೆ ಕುಡಿಯುವ ನೀರಿನ ತೊಂದರೆ ಆಗದಂತೆ ಮುಂಜಾಗ್ರತ ಕ್ರಮ ವಹಿಸಿ ಜನರಿಗೆ ಮತ್ತು ದನ ಕರುಗಳಿಗೆ ಅನುಕೂಲ ಮಾಡಿಕೊಡಲು ಸಕಲ ಸಿದ್ದರಾಗಬೇಕು ಎಂದು ಶಾಸಕರು ಸೂಚನೆ ನೀಡಿದರು ನೀರಾವರಿ ಇಲಾಖೆ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯತ್ ಪಿಡಿಒಗಳು ನಗರಸಭಾ ಸಿಬ್ಬಂದಿ ಪಟ್ಟಣ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು ಸಿರುಗುಪ್ಪ ತಾಲೂಕಿನ ಅಭಿವೃದ್ಧಿಗಾಗಿ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!