ಕುಡುತಿನಿ : ನಾಳೆ ಶ್ರೀ ಆಂಜಿನೇಯ ಸ್ವಾಮಿ ರಥೋತ್ಸವ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 17- ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವ್ಯಾಪ್ತಿಯ ಕುಡುತಿನಿ ಪಟ್ಟಣದ ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ನಾಳೆ ನಡೆಯಲಿದೆ.
ಬೆಳಿಗ್ಗೆ 07 ಗಂಟೆಗೆ ಮಡಿತೇರು ಮತ್ತು ಸಂಜೆ 05.30 ಗಂಟೆಗೆ ರಥೋತ್ಸವ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
