ಕುಷ್ಠರೋಗ ನಿರ್ಮೂಲನೆ ಸರ್ವರೂ ಕೈ ಜೋಡಿಸಿ : ಡಾ.ಈಶ್ವರ ಸವಡಿ
ಕರುನಾಡ ಬೆಳಗು ಸುದ್ದಿ
ಗಂಗಾವತಿ,1- ಕುಷ್ಠರೋಗ ನಿರ್ಮೂಲನೆ ಸರ್ವರೂ ಕೈ ಜೋಡಿಸಿ ಎಂದು ಉಪವಿಭಾಗ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಈಶ್ವರ ಸವಡಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ.ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ಪ್ರಯುಕ್ತ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ,ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮತನಾಡಿ ವ್ಯಕ್ತಿಯ ದೇಹದ ಮೇಲೆ ಯಾವುದೇ ಭಾಗದಲ್ಲಿ ತಿಳಿಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ,ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹಾಗೂ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಿ ಭಯ ಬೇಡ ಕುಷ್ಠರೋಗ ಸಂಪೂರ್ಣ ಗುಣಮುಖ ಹೊಂದುವ ಖಾಯಿಲೆಯಾಗಿದೆ.
ಕುಷ್ಠರೋಗವನ್ನು ಶೀಘ್ರ ಪತ್ತೆ ಹಚ್ಚಿ ನಿಗಧಿತ ಸಂಪೂರ್ಣ ಚಿಕಿತ್ಸೆಯನ್ನು ಪಡೆದು ನಿಯಮಿತ ವ್ಯಾಯಾಮ ಮಾಡಿದಲ್ಲಿ ಕುಷ್ಠರೋಗದಿಂದ ಸಂಪೂರ್ಣ ಗುಣಮುಖ ಹೊಂದಬಹುದು.
ಬಹುವಿಧ ಔಷಧಿ ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ, ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ ಎಂದರು.
ಪ್ರಭಾರಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಎಂ.ಗುರುರಾಜ ಪ್ರತಿಜ್ಞಾ ವಿದಿ ಭೋದಿಸಿದರು.
ಈ ಸಂದರ್ಭದಲ್ಲಿ ಚರ್ಮರೋಗ ತಜ್ಞ ಡಾ.ರಮೇಶ, ಡಾ.ವಿಜಯಕುಮಾರ,ಡಾ.ನಾಗರಾಜ,ಕಛೇರಿಯ ಅಧಿಕ್ಷಕಿ ಸೂಗಮ್ಮ,ಡಾ.ರೇಖಾ,ಡಾ.ಶ್ರೀದೇವಿ, ತಾಲೂಕು ಹಿರಿಯ ಆರೋಗ್ಯ ನೀರಿಕ್ಷಣಾದಿಕಾರಿಗಳಾದ ವೆಂಕಟೇಶ, ವಿಜಯ ಪ್ರಸಾದ್,ಆರೋಗ್ಯ ಸಿಬ್ಬಂದಿ ದ್ಯಾವದ್ರಿ,ಸುರೇಶ,ಯಮನೂರಪ್ಪ ಬಜೇಂತ್ರಿ ಭಾಗವಹಿಸಿದ್ದರು.
