
ಕೂಡ್ಲಿಗಿ : ಅಂಗನವಾಡಿ ಹುದ್ದೆ ಅಧಿಸೂಚನೆ ರದ್ದು
ಕರುನಾಡ ಬೆಳಗು ಸುದ್ದಿ
ವಿಜಯನಗರ, 10- ಕೂಡ್ಲಿಗಿ ತಾಲೂಕಿನ ಅಂಗನವಾಡಿಗಳಲ್ಲಿ ಖಾಲಿಯಿರುವ 5 ಕಾರ್ಯಕರ್ತೆಯರು ಹಾಗೂ 15 ಸಹಾಯಕಿಯರ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ವಿಜಯನಗರ, 9- 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ ಕಾನೂನು ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ 2 ವರ್ಷ ತರಬೇತಿ ನೀಡಲಿದ್ದುü ತಿಂಗಳಿಗೆ 10,000 ರೂ.ಶಿಷ್ಯವೇತನ ಮಂಜೂರು ಮಾಡಲಾಗುವುದು. ಆಸಕ್ತ ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಜುಲೈ 30ರೊಳಗೆ ಇಲಾಖೆಯ ವೆಬ್‌ಸೈಟ್ www.sw.kar.nic.in.£À°è Stipend To Law Graduate ರಲ್ಲಿ ಅರ್ಜಿ ಸಲ್ಲಿಸಿ ಕಚೇರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.