f7838207-9c3a-4798-bfab-8bcb1d337721

ಉಜ್ವಲ ಯೋಜನೆಯಡಿ ಗ್ಯಾಸ್ ಹಾಗೂ ಸಿಲಿಂಡರ್ ವಿತರಣೆ

ಕೇಂದ್ರದ ಯೋಜನೆ ಸದುಪಯೋಗ ಪಡಿಸಿಕೊಳ್ಳಿ: ಸಂಗಣ್ಣ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೭-  ಪ್ರತಿಯೊಬ್ಬರು ಕೇಂದ್ರ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಹಾಗೂ ಸಿಲಿಂಡರ್ ವಿತರಿಸಿ ಮಾತನಾಡಿದರು.
ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್‌ಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಬೇಕು. ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಅಧಿಕಾರಿಗಳು  ಯಶಸ್ವಿಗೊಳಿಸಬೇಕು ಎಂದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ವರ್ಗಗಳ ಅಭಿವೃದ್ಧಿ ಗೆ ಪೂರಕವಾಗುವ ಯೋಜನೆ ಜಾರಿಗೊಳಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ದಂತೆ ಒಂದು ವರ್ಗದ ತುಷ್ಠಿಕರಣಕ್ಕೆ ಸೀಮಿತವಾಗಿಲ್ಲ. ಜನರ ಅಭಿವೃದ್ಧಿ ಯಿಂದ ಮಾತ್ರ ದೇಶ ಅಭಿವೃದ್ಧಿ ಎಂಬ ಸಂಕಲ್ಪದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾತ್ರ ಗ್ಯಾರೆಂಟಿ ಯೋಜನೆ ಪ್ರಸ್ತಾಪಿಸುವ ಕಾಂಗ್ರೆಸ್ ಗೆ ಪಂಚರಾಜ್ಯ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿಗೆ ಮೋದಿ ಅವರೇ ಗ್ಯಾರೆಂಟಿ. ಮಹಿಳೆಯರಿಗೆ ಉಜ್ವಲ ಹಾಗೂ ಸ್ವಯಂ ಉದ್ಯೋಗ, ಹಿರಿಯ ನಾಗರಿಕರಿಕರಿಗೆ ಪಿಂಚಣಿ, ಯುವಕರಿಗೆ ಸ್ಟಾಟ್೯ ಅಪ್ ಯೋಜನೆ ಸೇರಿ ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆ ಅನುಷ್ಠಾನ ಮಾಡಿದ್ದಾರೆ. ದೇಶದ ಆರ್ಥಿಕತೆಯು ಮುಂದುವರಿದ ದೇಶಗಳಿಗೆ ಮಾದರಿಯಾಗುವಂತೆ ಮಾಡಿದ ಕೀರ್ತಿ ಪ್ರಧಾನಮಂತ್ರಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.

ಕೇಂದ್ರದ ಯೋಜನೆ ಮುಂದಿಟ್ಟುಕೊಂಡು ಪ್ರಚಾರ: ಮುಂಬರುವ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವದ ಎರಡು ಅವಧಿಯ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಲಾಗುವುದು. ಪ್ರತಿಯೊಂದು ಬೂತ್ ನಲ್ಲಿ ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆ ತಿಳಿಸುವುದು ಹಾಗೂ ಸದುಪಯೋಗ ಪಡಿಸಿಕೊಳ್ಳುವಂತೆ ಮಾಡಬೇಕು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಲು ಜನತೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

   ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಜನರ ಜೀವನ ಮಟ್ಟ ಸುಧಾರಿಸಬೇಕು.ಜನತೆ ಅಭಿವೃ

ದ್ಧಿ ಯಾದರೆ, ದೇಶ ಅಭಿವೃದ್ಧಿ ಆದಂತೆ.
– ಸಂಗಣ್ಣ ಕರಡಿ, ಸಂಸದರು.

Leave a Reply

Your email address will not be published. Required fields are marked *

error: Content is protected !!