
ನಾಳೆ ಮಾರ್ಚ 2ಕ್ಕೆ ಕೊಪ್ಪಳಕ್ಕೆ ಎಚ್ ಡಿ ಕೆ ; ಮಹಾಂತಯ್ಯನಮಠ
ಕರುನಾಡ ಬೆಳಗು ಸುದ್ದಿ
ಕೊಪ್ಪಳ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಭಾನುವಾರ( ಮಾ.2ರಂದು) ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ವೀರೇಶ ಮಹಾಂತಯ್ಯನಮಠ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಚ್.ಡಿ.ಕುಮಾರಸ್ವಾಮಿ ಅವರು, ಅಂದು ಬೆಳಗ್ಗೆ 9:30ಕ್ಕೆ ಹೆಲಿಕಾಪ್ಟರ್ ಮೂಲಕ ಕೊಪ್ಪಳ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ನಗರದ ಶ್ರೀ ಮಹಾವೀರ ಸಮುದಾಯ ಭವನದಲ್ಲಿ ನಡೆಯಲಿರುವ ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರ ಮಗನ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಶ್ರೀ ಗವಿಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು, ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳಾಗಿರುವ ವೀರೇಶ ಮಹಾಂತಯ್ಯನಮಠ ಅವರ ಮನೆಗೆ ಭೇಟಿ ನೀಡಲಿದ್ದಾರೆ.
ನಂತರ 11:00 ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿ ಮಧ್ಯಾಹ್ನ 12:45ಕ್ಕೆ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.